Advertisement
ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಮುಖ್ಯ ಭಾಷಣ ಮಾಡಲಿದ್ದು, ದ.ಕ. ಮತ್ತು ಉಡುಪಿ ಜಿಲ್ಲೆಯ ಲಕ್ಷಕ್ಕೂ ಅಧಿಕ ಮಂದಿ ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಸಂಜೀವ ಮಠಂದೂರು ರವಿವಾರ ಸಮಾವೇಶ ಸ್ಥಳಕ್ಕೆ ಭೇಟಿ ನೀಡಿ, ಸಿದ್ಧತೆಗಳ ಬಗ್ಗೆ ಪರಿಶೀಲಿಸಿದರು. ಪೊಲೀಸ್ ಅಧಿಕಾರಿಗಳಿಂದ ಭದ್ರತೆಯ ಮಾಹಿತಿ ಪಡೆದುಕೊಂಡರು. ಶಾಸಕ ಡಾ| ಭರತ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಬಿಜೆಪಿ ಉಡುಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಪ್ರಮುಖರಾದ ಅರುಣ್ ಕುಮಾರ್, ಜಗದೀಶ ಶೇಣವ, ಸಂದೇಶ ಶೆಟ್ಟಿ ಉಪಸ್ಥಿತರಿದ್ದರು.
Related Articles
Advertisement
ಬಿಗಿ ಬಂದೋಬಸ್ತ್; ಕಟ್ಟೆಚ್ಚರಸಮಾವೇಶ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುವ ಗೋಲ್ಡ್ ಫಿಂಚ್ ಮೈದಾನ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಪೊಲೀಸ್ ಇಲಾಖೆ ವ್ಯಾಪಕ ಬಂದೋಬಸ್ತ್ ಕೈಗೊಂಡಿದೆ. ಪೊಲೀಸ್ ಆಯುಕ್ತ ಡಾ| ಹರ್ಷ ನೇತೃತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆ, ನಗರ ಸಶಸ್ತ್ರ ಮೀಸಲು ಪಡೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಕೆಎಸ್‌ಆರ್‌ಪಿ ಸೇರಿದಂತೆ ವಿವಿಧ ಶ್ರೇಣಿಯ ಪೊಲೀಸರು ಭದ್ರತೆಯ ಉಸ್ತುವಾರಿಯಲ್ಲಿದ್ದಾರೆ. ಸಾವಿರಕ್ಕೂ ಅಧಿಕ ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ. ನಗರದ ಆಯಕಟ್ಟಿನ ಪ್ರದೇಶಗಳಲ್ಲಿಯೂ ಭದ್ರತೆ ಏರ್ಪಡಿಸಲಾಗಿದೆ. ಸಮಾವೇಶ ನಡೆಯುವ ವ್ಯಾಪ್ತಿಯಲ್ಲಿ ಬಾಂಬ್ ನಿಷ್ಕ್ರಿಯ ದಳದ ತಂಡ ತಪಾಸಣೆ ನಡೆಸುತ್ತಿದೆ. ಮಧ್ಯಾಹ್ನ 3ರಿಂದ ಆರಂಭ
ಮಧ್ಯಾಹ್ನ 3 ಗಂಟೆಗೆ ಸಮಾವೇಶ ಆರಂಭಗೊಳ್ಳಲಿದೆ. ರಾಜನಾಥ್ ಸಿಂಗ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಡಿ.ವಿ. ಸದಾನಂದ ಗೌಡ, ಸಂಸದರಾದ ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿಯ ಎಲ್ಲ ಬಿಜೆಪಿ ಶಾಸಕರು, ವಿ.ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ. ಹೆದ್ದಾರಿ ಸಂಚಾರ ಮಾರ್ಪಾಡು
ಮಂಗಳೂರು: ಜ. 27ರ ಬೆಳಗ್ಗೆ 9ರಿಂದ ರಾತ್ರಿ 9ರ ವರೆಗೆ ಹೆದ್ದಾರಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.
ಸಮಾವೇಶಕ್ಕೆ ಬರುವ ವಾಹನ ಸಮಾವೇಶ ಸ್ಥಳದಲ್ಲಿ ನಿಗದಿಪಡಿಸಿದ ಸ್ಥಳದಲ್ಲಿ ನಿಲುಗಡೆ ಮಾಡಬೇಕು.
ಉಡುಪಿಯಿಂದ ಬೆಂಗಳೂರು ಕಡೆಗೆ ಪಡುಬಿದ್ರಿ-ಕಾರ್ಕಳ-ಧರ್ಮ ಸ್ಥಳ- ಶಿರಾಡಿಯಾಗಿ ಸಂಚರಿಸಬೇಕು.
ಬೆಂಗಳೂರಿನಿಂದ ಮಂಗಳೂರು ಕಡೆಗೆ ಮೆಲ್ಕಾರ್-ಬಿ.ಸಿ. ರೋಡ್ ವಯಾ ಕೊಣಾಜೆ-ತೊಕ್ಕೊಟ್ಟು ಮಾರ್ಗವಾಗಿ ಸಂಚರಿಸಬೇಕು.
ಬಿ.ಸಿ. ರೋಡ್‌ನಿಂದ ಮಂಗಳೂರು ಕಡೆಗೆ ಬರುವವರು ಪೊಳಲಿ ಕೈಕಂಬ ಮಾರ್ಗವಾಗಿ ಸಂಚರಿಸಬೇಕು.
ಬಿ.ಸಿ. ರೋಡ್, ಪಂಪ್‌ವೆಲ್ ಕಡೆಯಿಂದ ಉಡುಪಿ ಕಡೆಗೆ ನಂತೂರು-ಕೈಕಂಬ-ಮೂಡುಬಿದಿರೆ ಮಾರ್ಗವಾಗಿ ಸಂಚರಿಸಬೇಕು.
ಕೊಟ್ಟಾರಚೌಕಿ, ಮಂಗಳೂರು ನಗರದಿಂದ ಉಡುಪಿ ಕಡೆಗೆ ಕೆಪಿಟಿ-ನಂತೂರು-ಮೂಡುಬಿದಿರೆ ಮಾರ್ಗವಾಗಿ ಸಂಚರಿಸಬೇಕು.
ಗೋಲ್ಡ್‌ಫಿಂಚ್ ಸಿಟಿ ರಾ.ಹೆ. 66ರ ಪಕ್ಕದಲ್ಲೇ ಇದೆ. ಹಾಗಾಗಿ ಹೆದ್ದಾರಿ ಸಹಿತ ಜಿಲ್ಲೆಯ ಪ್ರಮುಖ ರಸ್ತೆಗಳು ಮತ್ತು ಮಂಗಳೂರು ನಗರಕ್ಕೆ ಹೊಂದಿಕೊಂಡ ಪ್ರಮುಖ ರಸ್ತೆಗಳಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ವಾಹನ ದಟ್ಟಣೆ, ಸಂಚಾರ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ.