Advertisement

ಗ್ರಾಮದ ಅಭಿವೃದ್ಧಿಯಲ್ಲಿ ಜನರ ಸಹಕಾರ ಅಗತ್ಯ: ಅಂಗಾರ

12:36 AM Jun 22, 2019 | mahesh |

ಕಡಬ: ಗ್ರಾಮೀಣ ರಸ್ತೆಗಳು ಸುಸ್ಥಿತಿಯಲ್ಲಿದ್ದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳು ಸೇರಿದಂತೆ ಅಭಿವೃದ್ಧಿಯಾಗಬೇಕಾದರೆ ಜನರ ಸಹಕಾರವೂ ಅಗತ್ಯ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌. ಅಂಗಾರ ಅವರು ನುಡಿದರು.

Advertisement

ಅವರು 35 ಲಕ್ಷ ರೂ. ಅನುದಾನದಲ್ಲಿ ಅಭಿವೃದ್ಧಿಗೊಂಡ ಎಡಮಂಗಲ -ಶ್ರೀ ಕ್ಷೇತ್ರ ಕೆಮ್ಮಲೆ ಹೇಮಳ ಕಾಂಕ್ರೀಟ್ ರಸ್ತೆ ಉದ್ಘಾಟನೆಯನ್ನು ಉದ್ಘಾಟಿಸಿದ ಬಳಿಕ ಹೇಮಳ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಜರಗಿದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುವ ಸಂದರ್ಭದಲ್ಲಿ ಸ್ಥಳೀಯ ಜನರು ಕಾಮಗಾರಿಗಳ ಗುಣಮಟ್ಟದ ಕುರಿತು ಕಾಳಜಿ ವಹಿಸಬೇಕು. ಕಳಪೆ ಕಾಮಗಾರಿಗಳು ನಡೆದು ಸರಕಾರದ ಅನುದಾನ ಪೋಲಾಗದಂತೆ ಜಾಗ್ರತೆ ವಹಿಸಿ ಗ್ರಾಮದ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು ಎಂದು ಹೇಳಿದರು.

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸೇತುವೆಗಳು, ಗ್ರಾಮೀಣ ರಸ್ತೆಗಳೂ ಸೇರಿದಂತೆ ಪ್ರಮುಖ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿಪಡಿಸಲು ವಿಶೇಷ ಅನುದಾನಗಳನ್ನು ನೀಡಲಾಗಿದೆ. ಈಗಾಗಲೇ ಹಲವು ಸೇತುವೆಗಳು ಹಾಗೂ ರಸ್ತೆಗಳ ಕಾಮಗಾರಿಗಳು ಮುಗಿದಿದ್ದು, ಉಳಿದ ಕಾಮಗಾರಿಗಳು ಶೀಘ್ರ ಆರಂಭಗೊಳ್ಳಲಿದೆ ಎಂದರು.

ಬೆಳ್ಳಾರೆ ಜಿ.ಪಂ.ಕ್ಷೇತ್ರದ ಸದಸ್ಯ ಎಸ್‌.ಎನ್‌. ಮನ್ಮಥ ಅವರು ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭಹಾರೈಸಿದರು. ಬಿಜೆಪಿ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವೆಂಕಟ್ ವಳಲಂಬೆ, ತಾ.ಪಂ. ಸದಸ್ಯೆ ಶುಭದಾ ಎಸ್‌. ರೈ, ಎಣ್ಮೂರು ಗ್ರಾ.ಪಂ. ಅಧ್ಯಕ್ಷೆ ಜಾನಕಿ ಎಸ್‌., ಉಪಾಧ್ಯಕ್ಷ ಕರುಣಾಕರ ಹುದೇರಿ, ಸದಸ್ಯರಾದ

Advertisement

ರಘನಾಥ ರೈ, ಕುಸುಮಾವತಿ ಕೊಡ್ಜೆ, ಸುಳ್ಯ ಎಪಿಎಂಸಿ ಉಪಾಧ್ಯಕ್ಷ ಸಂತೋಷ್‌ ಜಾಕೆ, ಬಿಜೆಪಿ ಬೆಳ್ಳಾರೆ ಶಕ್ತಿ ಕೇಂದ್ರದ ಕಾರ್ಯದರ್ಶಿ ಚಂದ್ರಶೇಖರ್‌ ಪನ್ನೆ, ಶ್ರೀ ಕ್ಷೇತ್ರ ಕೆಮ್ಮಲೆ ದೇವಸ್ಥಾನದ ಟ್ರಸ್ಟ್‌ ಅಧ್ಯಕ್ಷ ನಾರಾಯಣ ಕೊಡ್ಜೆ , ಜೀಣೊìೕದ್ಧಾರ ಸಮಿತಿಯ ಅಧ್ಯಕ್ಷ ಹೊನ್ನಪ್ಪ ಐಪಳ, ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಜಯಾನಂದ ಕೆ. ಮುಂತಾದ ಪ್ರಮುಖರು ಉಪಸ್ಥಿತರಿದ್ದರು. ಶ್ರೀ ಕ್ಷೇತ್ರ ಕೆಮ್ಮಲೆ ಹಾಗೂ ಊರವರ ಪರವಾಗಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಅನುದಾನ ಒದಗಿಸಿದ ಶಾಸಕ ಎಸ್‌. ಅಂಗಾರ ಅವರನ್ನು ಕೆಮ್ಮಲೆ ದೇವಸ್ಥಾನದ ಜೀಣೊìೕದ್ಧಾರ ಸಮಿತಿಯ ಅಧ್ಯಕ್ಷ ಹೊನ್ನಪ್ಪ ಐಪಳ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಜಯಾನಂದ ಕೆ. ಸಮ್ಮಾನಿಸಿದರು.

ಎನಾರ್ದನ ಎ. ಹೇಮಳ ಸ್ವಾಗತಿಸಿ, ಬಾಲಕೃಷ್ಣ ಕೆ. ಹೇಮಳ ಪ್ರಸ್ತಾವನೆಗೈದರು. ಹರ್ಷಿತ್‌ ಹೇಮಳ ನಿರೂಪಿಸಿ, ಗೋಪಾಲಕೃಷ್ಣ ಕೆ. ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next