Advertisement

ಸಿದ್ದರಾಮಯ್ಯರಿಂದ ಜನಪರ ಆಡಳಿತ

05:01 PM Feb 03, 2018 | |

ಸಿಂಧನೂರು: ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ಜನಪರ ಆಡಳಿತ ನೀಡಿದ್ದಾರೆ. 2013ರಲ್ಲಿ ನಡೆದ ಚುನಾವಣೆಯಲ್ಲಿ ಪ್ರಣಾಳಿಕೆಯಲ್ಲಿ ನೀಡಿದ 165 ಭರವಸೆಗಳಲ್ಲಿ 155 ಈಡೇರಿಸಿ ಸಮಾಜದ ಕಟ್ಟ ಕಡೆಯ ಮನುಷ್ಯನಿಗೂ ಸರ್ಕಾರದ ಸೌಲಭ್ಯ ತಲುಪಿಸಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸಿಂಧನೂರು, ಮಸ್ಕಿ, ಲಿಂಗಸುಗೂರು ಚುನಾವಣಾ ವೀಕ್ಷಕ ರುಖೂಂ ಪಟೇಲ್‌ ಹೇಳಿದರು.

Advertisement

ನಗರದ ಅನ್ನದಾನೇಶ್ವರ ಕಲ್ಯಾಣಮಂಟಪದಲ್ಲಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯಿಂದ ಏರ್ಪಡಿಸಲಾಗಿದ್ದ ಬೂತ್‌ ಸಮಿತಿ ಅಧ್ಯಕ್ಷರು, ಬೂತ್‌ ಏಜೆಂಟರು ಹಾಗೂ ಗ್ರಾಪಂ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಅರ್ಧಗಂಟೆಯಲ್ಲೇ ಸಚಿವ ಸಂಪುಟದ ಸಭೆ ಕರೆದು ಅನ್ನಭಾಗ್ಯ ಯೋಜನೆ ಜಾರಿಗೆ ತಂದರು. ನಾಲ್ಕೂವರೆ ವರ್ಷದ ಆಡಳಿತವಧಿಯಲ್ಲಿ ಹಲವಾರು ಯೋಜನೆ ಜಾರಿಗೆ ತಂದು ರಾಜ್ಯದ ಜನರ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಹೇಳಿದರು.

ಬಿಜೆಪಿ ಮುಖಂಡರು ಕಾಂಗ್ರೆಸ್‌ ಮುಕ್ತ ಕರ್ನಾಟಕ ಮಾಡುವುದಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ತಮ್ಮ ಕೇಡುಗಾಲಕ್ಕೆ ಅವರೇ ದಾರಿ ಮಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷ ನೀಡಿದ ಜನಪರ ಆಡಳಿತದ ಮುಂದೆ ಬಿಜೆಪಿ ಮುಂದಿನ ಚುನಾವಣೆಯಲ್ಲಿ ಧೂಳಿಪಟವಾಗುತ್ತದೆ. ಸಿದ್ದರಾಮಯ್ಯ ಅವರ ಆಡಳಿತದ ಮುಂದೆ ಯಡಿಯೂರಪ್ಪ ಅವರ ಆಟ ನಡೆಯುವುದಿಲ್ಲ ಎಂದು ಹೇಳಿದರು.

ಸಹಕಾರಿ ಸಂಘಗಳಲ್ಲಿನ 50 ಸಾವಿರ ರೂ. ರೈತರ ಸಾಲ ಮನ್ನಾ ಮಾಡಲಾಗಿದೆ. ಇದರಿಂದ ರೈತರ ಅಭಿವೃದ್ಧಿಗೆ ರಾಜ್ಯ
ಸರ್ಕಾರ ಕಂಕಣಬದ್ಧವಾಗಿದೆ ಎಂದು ಸಿದ್ದರಾಮಯ್ಯ ತೋರಿಸಿಕೊಟ್ಟಿದ್ದಾರೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಪಕ್ಷದ ವಿವಿಧ ಘಟಕದ ಅಧ್ಯಕ್ಷರು, ಕಾರ್ಯಕರ್ತರು ಪ್ರತಿ ಮನೆಗೆ ಭೇಟಿ ನೀಡಿ ರಾಜ್ಯ ಸರ್ಕಾರದ ಸಾಧನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು. ಕೆಪಿಸಿಸಿ ಕಾರ್ಯದರ್ಶಿ ಅಮೃತರಾವ ಚಿಪ್ಕೋಡಿ ಮಾತನಾಡಿದರು. ಶಾಸಕ ಹಂಪನಗೌಡ ಬಾದರ್ಲಿ ಅಧ್ಯಕ್ಷತೆ ವಹಿಸಿದ್ದರು.

Advertisement

ಕೆಪಿಸಿಸಿ ಸದಸ್ಯ ಎನ್‌. ಶಿವನಾಗಪ್ಪ, ಜಿಪಂ ಸದಸ್ಯರಾದ ಬಸವರಾಜ ಹಿರೇಗೌಡರ, ಬಾಬುಗೌಡ ಬಾದರ್ಲಿ, ದುರುಗಪ್ಪ ಗುಡಗಲದಿನ್ನಿ, ಮಾಜಿ ಸದಸ್ಯರಾದ ಚಂದುಸಾಬ್‌ ಮುಳ್ಳೂರು, ಶಿವನಗೌಡ ಎಲೆಕೂಡ್ಲಗಿ, ಹನುಮಂತಪ್ಪ ಮುದ್ದಾಪುರ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಂ. ಕಾಳಿಂಗಪ್ಪ, ನಗರಸಭೆ ಅಧ್ಯಕ್ಷೆ ಮಂಜುಳಾ ಪಾಟೀಲ, ಮಾಜಿ ಅಧ್ಯಕ್ಷ ಜಾಫರ್‌ ಅಲಿ ಜಾಹಗೀರದಾರ್‌, ಮುಖಂಡರಾದ ತಿಮ್ಮಯ್ಯ ನಾಯಕ, ಮಲ್ಲನಗೌಡ ಕನ್ನಾರಿ, ಲಿಂಗರಾಜ ಹಂಚಿನಾಳ, ಗೋಪಿನಿಡಿ ಕೃಷ್ಣ, ಸಿದ್ರಾಮಪ್ಪ ಮಾಡಶಿರವಾರ, ನಗರಸಭೆ ಸದಸ್ಯರಾದ ಪ್ರಭುರಾಜ, ಶೇಖರಪ್ಪ ಗಿಣಿವಾರ, ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಖಾಜಿಮಲಿಕ್‌ ವಕೀಲರು, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಶ್ರೀದೇವಿ ಶ್ರೀನಿವಾಸ, ಕಾರ್ಮಿಕ ಘಟಕದ ಅಧ್ಯಕ್ಷ ನನ್ನುಸಾಬ್‌ ಮೇಸ್ತ್ರಿ ಇದ್ದ.

Advertisement

Udayavani is now on Telegram. Click here to join our channel and stay updated with the latest news.

Next