Advertisement

ಜನರ ಆರೋಗ್ಯ ರಕ್ಷಣೆ ನಮ್ಮ ಹೊಣೆ

12:36 PM Aug 17, 2020 | Suhan S |

ಕನಕಪುರ: ತಾಲೂಕಿನ ಜನರ ಆರೋಗ್ಯ ಕಾಪಾಡುವುದು ನಮ್ಮ ಹೊಣೆಯಾಗಿದ್ದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು ರಾಜ್ಯಾದ್ಯಂತ ಆರೋಗ್ಯ ಹಸ್ತ ಎಂಬ ಕಾರ್ಯಕ್ರಮ ರೂಪಿಸಿದ್ದು ಯಾರೂ ದೃತಿಗೆಡುವ ಅಗತ್ಯವಿಲ್ಲ ಎಂದು ಸಂಸದ ಡಿ. ಕೆ.ಸುರೇಶ್‌ ಧೈರ್ಯ ತುಂಬಿದರು.

Advertisement

ಬೂದಿಗುಪ್ಪೆ ಗ್ರಾಮದಲ್ಲಿ ನಡೆದ ಆರೋಗ್ಯ ಹಸ್ತ ಕಾರ್ಯ ಕ್ರಮದಲ್ಲಿ ಮಾತನಾಡಿ, ಕಳೆದ 5ತಿಂಗಳಿಂದ ಸರ್ಕಾರ ಜನಪರ ನಿರ್ಧಾರ ಕೈಗೊಳ್ಳದೆ ಸಂಕಷ್ಟದಲ್ಲಿರುವವರಿಗೆ ಸಮರ್ಪಕ ಪರಿಹಾರ ನೀಡದೆ ಕೈಚೆಲ್ಲಿ ಕುಳಿತಿದೆ ಎಂದು ಆರೋಪಿಸಿದರು. ಕೋವಿಡ್ ಸೋಂಕಿತರಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡದೇ ಇರುವುದು ದುಖಃದ ಸಂಗತಿ ಆಸ್ಪತ್ರೆಯಲ್ಲಿ ರೋಗಿಗಳ ಪರಿಸ್ಥಿತಿ ಕಣ್ಣಾರೆ ಕಂಡಿದ್ದೇನೆ. ಸರ್ಕಾರ ಮಾಧ್ಯಮಗಳ ಮುಂದೆ ಹೇಳುವುದೇ ಒಂದು ಆದರೆ ಮಾಡುವುದು ಇನ್ನೊಂದು. ಈ ವೇಳೆ ಕಾಂಗ್ರೆಸ್‌ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ, ಮಲ್ಲಿಕಾರ್ಜುನ್‌ ಖರ್ಗೆ, ಎಚ್‌.ಕೆ.ಪಾಟೀಲ್‌, ಹಿರಿಯ ನಾಯಕರು ರಾಜ್ಯದ ಜನರ ರಕ್ಷಣೆಗೆ ಮುಂದಾಗಿದ್ದಾರೆ. ಕಾರ್ಯಕರ್ತರು ಕೋವಿಡ್ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸುವರು ಎಂದರು.

ಕೆಲವು ಸೋಂಕಿತರು ರಕ್ತದೊತ್ತಡ, ಮಧುಮೇಹದಿಂದ ಬಳಲುತ್ತಿದ್ದು ಸಾವು ಹೆಚ್ಚಾಗಿ ಸಂಭವಿಸುತ್ತಿವೆ. ಹೀಗಾಗಿ ಇಂತಹ ಸಾವು ತಪ್ಪಿಸಲು ಕಾಂಗ್ರೆಸ್‌ ಕಾರ್ಯಕರ್ತರು ಮುಂದಾಗಿದ್ದಾರೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಿದರೆ ಸಾವು ನೋವುಗಳಿಗೆ ಕಡಿವಾಣ ಹಾಕಬಹುದು ಎಂದು ಸಲಹೆ ನೀಡಿದರು. ವಿಧಾನ ಪರಿಷತ್‌ ಸದಸ್ಯ ಎಸ್‌.ರವಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೃಷ್ಣಮೂರ್ತಿ ಇದ್ದರು

Advertisement

Udayavani is now on Telegram. Click here to join our channel and stay updated with the latest news.

Next