Advertisement
ಕೋವಿಡ್ ಹೊರಟು ಹೋಗಿದೆ ಎಂಬ ಭ್ರಮೆಯಲ್ಲಿ ಜನ ಮಾಸ್ಕ್ ಇಲ್ಲದೆ ಸಂಚಾರ ಮಾಡುತ್ತಿರುವ ದೃಶ್ಯಗಳು ಕಂಡು ಬರುತ್ತಿವೆ. ಮೂಗಿನ ಕೆಳ ಭಾಗಕ್ಕೆ ಮಾಸ್ಕ್ ಅನ್ನು ಕಾಟಾಚಾರಕ್ಕೆ ಹಾಕಿಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿದೆ. ಕಳೆದ ಎರಡು ದಿನಗಳಿಂದ 37ರಿಂದ40 ಪ್ರಕರಣಗಳು ಕಂಡು ಬರುತ್ತಿದೆ. ಈಗಾಗಲೇ ಕೇರಳದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ರಾಜ್ಯದಲ್ಲೂ ಕೋವಿಡ್ 3ನೇ ಅಲೆ ಭೀತಿಯಿದೆ. ಕೆಲವರು ನಾವು ಲಸಿಕೆ ಹಾಕಿಸಿಕೊಂಡಿದ್ದೇವೆ ನಮಗೆ ಕೋವಿಡ್ ಬರುವುದಿಲ್ಲ ಎಂಬ ಭ್ರಮೆಯಲ್ಲಿದ್ದಾರೆ.
ಮಾಸ್ಕ್ ಇಲ್ಲದೆ ಸಂಚರಿಸುತ್ತಾರೆ. ಬೆಂಗಳೂರಿಗೆ ನಾಲ್ಕು ತಾಲೂಕುಗಳು ಹೊಂದಿಕೊಂಡಿದ್ದು, ಬೆಂಗಳೂರಿನಿಂದ ಕೂಲಿ, ವ್ಯಾಪಾರ ಮತ್ತು ಇತರೆ ಕೆಲಸಗಳಿಗೆ ಬರುವುದರಿಂದ ಕೋವಿಡ್ ಭೀತಿ ಕಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಬ್ಬರ ಮೇಲೆ ಇನ್ನೊಬ್ಬರು ನಿಂತುಕೊಂಡು ವ್ಯಾಪಾರ ಮಾಡುವುದರಿಂದ ಕೋವಿಡ್ ಹೆಚ್ಚಳವಾಗುವ ಸಾಧ್ಯತೆಯಿದೆ.
Related Articles
ಮಾಸ್ಕ್ ಮತ್ತು ಸಾಮಾಜಿಕಅಂತರಕಾಯ್ದುಕೊಳ್ಳುವಂತೆ ಅರಿವು ಮೂಡಿಸಬೇಕು. ಮಾರುಕಟ್ಟೆಗಳ ಮೇಲೆ ಅಧಿಕಾರಿಗಳು ನಿಗಾವಹಿಸಬೇಕು. 3ನೇ ಅಲೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ. ಈಗಾಗಲೇ ಜನಸಂದಣಿ ಕಡಿಮೆ ಮಾಡಲು ಅನೇಕ ಕಾರ್ಯಕ್ರಮ
ರೂಪಿಸಲಾಗುತ್ತಿದೆ.
Advertisement
ಕೋವಿಡ್ ತಡೆಗೆ ಲಸಿಕಾ ಅಭಿಯಾನ: ಬೆಂ.ಗ್ರಾ. ಜಿಲ್ಲೆಯಲ್ಲಿ ಕೋವಿಡ್ ತಡೆಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ವಿವಿಧಕಡೆಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಮೊದಲ ಡೋಸ್ 3.73 ಲಕ್ಷ ಜನರು ಮತ್ತು 2ನೇ ಡೋಸ್ 97,335 ಮಂದಿ ಲಸಿಕೆ ಪಡೆದಿದ್ದಾರೆ. ಒಟ್ಟು ಮೊದಲ ಮತ್ತು ಎರಡನೇ ಡೋಸ್ ಸೇರಿ 4.70 ಲಕ್ಷ ಮಂದಿ ಜಿಲ್ಲೆಯಲ್ಲಿ ಲಸಿಕೆ ಪಡೆದಿದ್ದಾರೆ. ಜಿಲ್ಲೆಯಲ್ಲಿ ಒಂದೇ ದಿನ 20 ಸಾವಿರ ಡೋಸ್ ಲಸಿಕೆ ಬಂದಿರುವುದರಿಂದ ಮೊದಲ ಮತ್ತು ಎರಡನೇ ಡೋಸ್ ಪಡೆಯಲು ಲಸಿಕಾ ಅಭಿಯಾನ ಕೈಗೊಳ್ಳಲಾಗಿದೆ. 8 ಲಕ್ಷ ಲಸಿಕೆ ನೀಡುವ ಗುರಿಯನ್ನುಜಿಲ್ಲೆಯಲ್ಲಿ ಇಟ್ಟುಕೊಳ್ಳಲಾಗಿದೆ. ಪ್ರತಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಸಮರ್ಪಕ ಲಸಿಕೆ ಸಿಗುವಂತೆ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳುತ್ತಿದೆ. ಲಸಿಕೆಗಳನ್ನು ದಾಸ್ತಾನು ಮಾಡಲಾಗಿದೆ. ಜಿಲ್ಲೆಯಲ್ಲಿ ಶೇ.43ರಷ್ಟು ಲಸಿಕೆ ನೀಡಲಾಗಿದೆ.
ಪ್ರಾಣ ಉಳಿಸಿಕೊಳ್ಳಲು ಲಸಿಕೆಹಾಕಿಸಿಕೊಳಿದೇವನಹಳ್ಳಿ: ಕೋವಿಡ್ ದಿಂದ ಪ್ರಾಣ ಉಳಿಸಿಕೊಳ್ಳಬೇಕಾದರೆ ಲಸಿಕೆ ಹಾಕಿಸಿಕೊಳ್ಳಬೇಕು. ನೀವು ನಿಮ್ಮ ಕುಟುಂಬ ರಕ್ಷಣೆ ಮಾಡಿಕೊಳ್ಳಬೇಕಾದರೆ ತಪ್ಪದೆ ಲಸಿಕೆ ಹಾಕಿಸಿಕೊಳ್ಳಿಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎ.ತಿಪ್ಪೇಸ್ವಾಮಿ ತಿಳಿಸಿದರು. ಪಟ್ಟಣದ ಲಯನ್ಸ್ ಸೇವಾ ಭವನದ ಕೋವಿಡ್ ಲಸಿಕಾ ವಿತರಣಾ ಕೇಂದ್ರಕ್ಕೆ ಭೇಟಿ ನೀಡಿ ಲಸಿಕೆ ವಿತರಣೆಯನ್ನು ಪರಿಶೀಲಿಸಿ ಮಾತನಾಡಿ, ಬೆಂ.ಗ್ರಾ. ಜಿಲ್ಲೆಗೆ 20 ಸಾವಿರ ಡೋಸ್ ಲಸಿಕೆ ಬಂದಿದ್ದು, ಆಂದೋಲನ ಮಾಡಿ ಜನರಿಗೆ ಲಸಿಕೆ ನೀಡಲಾಗುವುದು. ಪ್ರತಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಲಸಿಕೆ ಪಡೆಯುವಂತೆ ಅರಿವು ಮೂಡಿಸಲಾಗುತ್ತಿದೆ. ಜನರು ಲಸಿಕೆ ಹಾಕಿಸಿಕೊಂಡರೆ ಯಾವುದೇ ಅಡ್ಡಪರಿಣಾಮವಿಲ್ಲ. ಸರ್ಕಾರದ ನಿರ್ದೇಶನದಂತೆ ಲಸಿಕೆ ವಿತರಣೆ ಮಾಡಲಾಗುವುದು. ಮೇಘ ಆಂದೋಲನ ನಡೆಸಿ 20 ಸಾವಿರ ಡೋಸನ್ನು ಜನರಿಗೆ ನೀಡಲಾಗುವುದು. ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಲಭ್ಯವಿದ್ದು,ಸಾರ್ವಜನಿಕರು ಲಸಿಕೆ ತೆಗೆದುಕೊಳ್ಳುವಂತೆ ಆಗಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್,ಲಯನ್ಸ್‌ಸಂಸ್ಥೆಯ ಕಾರ್ಯದರ್ಶಿ ಲಕ್ಷ್ಮೀನಾರಾಯಣ್(ಲಚ್ಚಿ) ಹಾಜರಿದ್ದರು. -ಎಸ್.ಮಹೇಶ್