Advertisement

Kannada: ನಾಮಫ‌ಲಕಗಳಲ್ಲಿ ಶೇ. 60 ಕನ್ನಡ: ಮಸೂದೆ ಮಂಡನೆ

12:41 AM Feb 14, 2024 | Pranav MS |

ಬೆಂಗಳೂರು: ನಾಮಫ‌ಲಕಗಳಲ್ಲಿ ಶೇ. 60 ಕನ್ನಡ ಬಳಕೆ ಮಾಡಬೇಕೆಂಬ ನಿಯಮ ಜಾರಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಮಸೂದೆ-2024ನ್ನು ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು.

Advertisement

ಈ ಹಿಂದೆ ಸಚಿವ ಸಂಪುಟ ಸಭೆಯಲ್ಲಿ ಅಧ್ಯಾದೇಶದ ಮೂಲಕ ನಿಯಮಕ್ಕೆ ತಿದ್ದುಪಡಿ ತರಲು ಸರಕಾರ ಮುಂದಾಗಿತ್ತು. ಆದರೆ ನಿರ್ಣಯ ವನ್ನು ರಾಜ್ಯಪಾಲರು ವಾಪಸ್‌ ಕಳುಹಿಸಿದ್ದರು.
ಮಂಗಳವಾರ ಮಂಡನೆಯಾಗಿರುವ ಮಸೂದೆ ಎಲ್ಲ ಇಲಾಖೆಗಳ ಅಧೀನದಲ್ಲಿ ಬರುವ ಅಧಿಕಾರಿಗಳು ಕನ್ನಡ ಬಳಕೆಗೆ ಹೆಚ್ಚಿನ ಆದ್ಯತೆ ನೀಡುವುದಕ್ಕೆ ಸಂಬಂಧಿಸಿ ರಚಿಸಿದ್ದ ರಾಜ್ಯ ಮಟ್ಟದ ಸಮಿತಿಗೆ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ನಿರ್ದೇಶಕರನ್ನು ಸದಸ್ಯರನ್ನಾಗಿಯೂ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಯನ್ನು ಸಂಚಾಲಕ ರನ್ನಾಗಿಯೂ ಮಾಡಲು ಅವಕಾಶ ಕಲ್ಪಿಸಿದೆ.

ಸರಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಪಡೆದು ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ, ವ್ಯವಹಾರ ಉದ್ಯಮ, ಟ್ರಸ್ಟ್‌, ಆಸ್ಪತ್ರೆ, ಪ್ರಯೋಗಾಲಯ ಮುಂತಾದವು ತಮ್ಮ ನಾಮಫ‌ಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ. 60ರಷ್ಟು ಪ್ರದರ್ಶಿಸಿವೆಯೇ ಇಲ್ಲವೇ ಎಂಬುದನ್ನು ಈ ಸಮಿತಿಯು ಖಚಿತಪಡಿಸಿಕೊಳ್ಳಬೇಕು ಎಂಬು ದಾಗಿಯೂ ಪ್ರಸ್ತಾವಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next