Advertisement
ಶುಕ್ರವಾರ ಸರಕಾರ ಈ ಕುರಿತ ಮಹತ್ವದ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರಕಾರದ ಕಚೇರಿಗಳಲ್ಲಿ ಹೊರಗುತ್ತಿಗೆ ಮೂಲಕ ಪಡೆಯಲಾಗುವ ಸೇವೆ ಮತ್ತು ಹುದ್ದೆಗಳಲ್ಲಿ ಶೇ. 33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಿಕೊಳ್ಳುವಂತೆ ಎಲ್ಲ ಇಲಾಖೆಗಳಿಗೆ ಸೂಚನೆ ನೀಡಿದೆ.
ಈ ಸೂಚನೆಗಳನ್ನು ಸ್ವಾಯತ್ತ ಸಂಸ್ಥೆಗಳು, ವಿ.ವಿ.ಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಇನ್ನಿತರ ಸರಕಾರಿ ವಲಯದ ಅಂಗ ಸಂಸ್ಥೆ ಗಳು ಕೂಡ ಪಾಲಿಸಬೇಕು ಎಂದು ಸರಕಾರ ನಿರ್ದೇಶಿಸಿದೆ. ಈ ಸಂಬಂಧ ಸರಕಾರದ ಎಲ್ಲ ಆಡಳಿತ ಇಲಾಖೆಗಳ ಕಾರ್ಯದರ್ಶಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಅಧೀನ ಇಲಾಖೆ ಗಳು ಮತ್ತು ಸರಕಾರದ ಅಂಗ ಸಂಸ್ಥೆಗಳಿಗೆ ಅಗತ್ಯ ಸೂಚನೆ ನೀಡಬೇಕು ಎಂದು ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸುತ್ತೋಲೆ ಯಲ್ಲಿ ತಿಳಿಸಿದ್ದಾರೆ.
Related Articles
Advertisement
ರಾಜ್ಯ ಸರಕಾರದ ಕಚೇರಿಗಳ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್‌ಗಳು, ಸ್ವಚ್ಛತಾ ಸಿಬಂದಿ, ಡಿ-ಗ್ರೂಪ್ ಹುದ್ದೆ ಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿ ಕೊಳ್ಳುವುದು ಸರಕಾರದ ಇತ್ತೀಚಿಗಿನ ಅಂಗೀ ಕೃತ ನೀತಿ. ಮಹಿಳೆಯರ ಸಶಕ್ತೀಕರಣ ಮತ್ತು ಅವರಿಗೆ ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶಗಳನ್ನು ಒದಗಿಸುವ ದೃಷ್ಟಿಯಿಂದ ರಾಜ್ಯ ಸಿವಿಲ್ ಸೇವೆಗಳಲ್ಲಿ ಶೇ. 30ರಷ್ಟು ನೇರ ನೇಮಕಾತಿ ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿರಿಸಲಾಗುತ್ತದೆ. ಈಗ ಹೊರಗುತ್ತಿಗೆ ನೇಮಕಾತಿಗಳಲ್ಲೂ ಶೇ. 33ರಷ್ಟು ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಡಲು ಸರಕಾರ ತೀರ್ಮಾನಿಸಿದೆ.
ಸುತ್ತೋಲೆಯಲ್ಲಿ ಏನಿದೆ?01 ರಾಜ್ಯ ಸರಕಾರದಕಚೇರಿಗಳಲ್ಲಿನ ಹೊರಗುತ್ತಿಗೆ ಸೇವೆಗಳು ಮತ್ತು ಹುದ್ದೆಗಳಲ್ಲಿ ಶೇ. 33ರಷ್ಟು ಮಹಿಳೆಯರಿಗೆ ಮೀಸಲು
02 ಸ್ವಾಯತ್ತ ಸಂಸ್ಥೆಗಳು, ವಿಶ್ವ ವಿದ್ಯಾನಿಲಯಗಳು, ಸ್ಥಳೀಯ ಸಂಸ್ಥೆ ಗಳು, ಇನ್ನಿತರ ಸರಕಾರಿ ವಲಯದ ಅಂಗ ಸಂಸ್ಥೆಗಳಿಗೂ ಅನ್ವಯ
03 ಮಹಿಳೆಯರ ಸಶಕ್ತೀಕರಣ ಮತ್ತು ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶ ಒದಗಿಸುವುದೇ ಉದ್ದೇಶ