Advertisement

ಹೊರಗುತ್ತಿಗೆ ನೇಮಕಾತಿಗಳಲ್ಲಿ ಶೇ. 33 ಮೀಸಲಾತಿ; ಮಹಿಳೆಯರಿಗೆ ಮೀಸಲು

02:19 AM May 21, 2022 | Team Udayavani |

ಬೆಂಗಳೂರು: ರಾಜ್ಯದ ಮಹಿಳೆ ಯರಿಗೆ ಸರಕಾರ ಸಿಹಿಸುದ್ದಿ ನೀಡಿದ್ದು, ಇನ್ನು ಮುಂದೆ ರಾಜ್ಯದಲ್ಲಿ ಹೊರಗುತ್ತಿಗೆ ನೇಮಕಾತಿಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಸಿಗಲಿದೆ.

Advertisement

ಶುಕ್ರವಾರ ಸರಕಾರ ಈ ಕುರಿತ ಮಹತ್ವದ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರಕಾರದ ಕಚೇರಿಗಳಲ್ಲಿ ಹೊರಗುತ್ತಿಗೆ ಮೂಲಕ ಪಡೆಯಲಾಗುವ ಸೇವೆ ಮತ್ತು ಹುದ್ದೆಗಳಲ್ಲಿ ಶೇ. 33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಿಕೊಳ್ಳುವಂತೆ ಎಲ್ಲ ಇಲಾಖೆಗಳಿಗೆ ಸೂಚನೆ ನೀಡಿದೆ.

ಡಾಟಾ ಎಂಟ್ರಿ ಆಪರೇಟರ್‌, ಡಿ-ಗ್ರೂಪ್‌ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಪಡೆಯುವ ಟೆಂಡರ್‌ ಪ್ರಕಟನೆ ಮತ್ತು ಹೊರಗುತ್ತಿಗೆ ಏಜೆನ್ಸಿಗಳೊಂದಿಗೆ ಮಾಡಿ ಕೊಳ್ಳಲಾಗುವ ಒಪ್ಪಂದದಲ್ಲಿ ಈ ಅಂಶವನ್ನು ಸೇರಿಸಲು ಸಂಬಂಧಪಟ್ಟ ಟೆಂಡರ್‌ ಆಹ್ವಾನಿಸುವ ಪ್ರಾಧಿಕಾರಗಳು ಕ್ರಮ ಕೈಗೊಳ್ಳಬೇಕು ಎಂದೂ ಸೂಚಿಸಲಾಗಿದೆ.

ಯಾರ್ಯಾರಿಗೆ ಅನ್ವಯ?
ಈ ಸೂಚನೆಗಳನ್ನು ಸ್ವಾಯತ್ತ ಸಂಸ್ಥೆಗಳು, ವಿ.ವಿ.ಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಇನ್ನಿತರ ಸರಕಾರಿ ವಲಯದ ಅಂಗ ಸಂಸ್ಥೆ ಗಳು ಕೂಡ ಪಾಲಿಸಬೇಕು ಎಂದು ಸರಕಾರ ನಿರ್ದೇಶಿಸಿದೆ. ಈ ಸಂಬಂಧ ಸರಕಾರದ ಎಲ್ಲ ಆಡಳಿತ ಇಲಾಖೆಗಳ ಕಾರ್ಯದರ್ಶಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಅಧೀನ ಇಲಾಖೆ ಗಳು ಮತ್ತು ಸರಕಾರದ ಅಂಗ ಸಂಸ್ಥೆಗಳಿಗೆ ಅಗತ್ಯ ಸೂಚನೆ ನೀಡಬೇಕು ಎಂದು ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಸುತ್ತೋಲೆ ಯಲ್ಲಿ ತಿಳಿಸಿದ್ದಾರೆ.

ಜತೆಗೆ ಈ ಸೂಚನೆಗಳನ್ನು ಕಾರ್ಯಗತ ಗೊಳಿಸುವಲ್ಲಿ ಯಾವುದೇ ತೊಂದರೆ ಉಂಟಾ ದರೂ ಸಂಬಂಧಪಟ್ಟ ಇಲಾಖಾ ಕಾರ್ಯ ದರ್ಶಿಗಳು ಅವುಗಳನ್ನು ಪರಿಹರಿಸಬೇಕು ಎಂದು ಸೂಚಿಸಲಾಗಿದೆ.

Advertisement

ರಾಜ್ಯ ಸರಕಾರದ ಕಚೇರಿಗಳ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್‌ಗಳು, ಸ್ವಚ್ಛತಾ ಸಿಬಂದಿ, ಡಿ-ಗ್ರೂಪ್‌ ಹುದ್ದೆ ಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿ ಕೊಳ್ಳುವುದು ಸರಕಾರದ ಇತ್ತೀಚಿಗಿನ ಅಂಗೀ ಕೃತ ನೀತಿ. ಮಹಿಳೆಯರ ಸಶಕ್ತೀಕರಣ ಮತ್ತು ಅವರಿಗೆ ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶಗಳನ್ನು ಒದಗಿಸುವ ದೃಷ್ಟಿಯಿಂದ ರಾಜ್ಯ ಸಿವಿಲ್‌ ಸೇವೆಗಳಲ್ಲಿ ಶೇ. 30ರಷ್ಟು ನೇರ ನೇಮಕಾತಿ ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿರಿಸಲಾಗುತ್ತದೆ. ಈಗ ಹೊರಗುತ್ತಿಗೆ ನೇಮಕಾತಿಗಳಲ್ಲೂ ಶೇ. 33ರಷ್ಟು ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಡಲು ಸರಕಾರ ತೀರ್ಮಾನಿಸಿದೆ.

ಸುತ್ತೋಲೆಯಲ್ಲಿ ಏನಿದೆ?
01 ರಾಜ್ಯ ಸರಕಾರದಕಚೇರಿಗಳಲ್ಲಿನ ಹೊರಗುತ್ತಿಗೆ ಸೇವೆಗಳು ಮತ್ತು ಹುದ್ದೆಗಳಲ್ಲಿ ಶೇ. 33ರಷ್ಟು ಮಹಿಳೆಯರಿಗೆ ಮೀಸಲು
02 ಸ್ವಾಯತ್ತ ಸಂಸ್ಥೆಗಳು, ವಿಶ್ವ ವಿದ್ಯಾನಿಲಯಗಳು, ಸ್ಥಳೀಯ ಸಂಸ್ಥೆ ಗಳು, ಇನ್ನಿತರ ಸರಕಾರಿ ವಲಯದ ಅಂಗ ಸಂಸ್ಥೆಗಳಿಗೂ ಅನ್ವಯ
03 ಮಹಿಳೆಯರ ಸಶಕ್ತೀಕರಣ ಮತ್ತು ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶ ಒದಗಿಸುವುದೇ ಉದ್ದೇಶ

 

Advertisement

Udayavani is now on Telegram. Click here to join our channel and stay updated with the latest news.

Next