Advertisement

ಪೆರ್ಡೂರು ರಥೋತ್ಸವ

06:20 AM Mar 17, 2018 | Karthik A |

ಹೆಬ್ರಿ: ಪೆರ್ಡೂರಿನ ಕದಳೀಪ್ರಿಯ ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಶುಕ್ರವಾರ ಕ್ಷೇತ್ರದ ತಂತ್ರಿಗಳಾದ ಕೆ.ಜಿ. ರಾಘವೇಂದ್ರ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಮನ್ಮಹಾರಥೋತ್ಸವ ಸಂಪನ್ನಗೊಂಡಿತು. ಬೆಳಗ್ಗೆ ಪ್ರಧಾನ ಹೋಮ, ಕಲಶಾಭಿಷೇಕ, ರಥಹೋಮ, ರಥಸಂಪ್ರೋಕ್ಷಣೆ, ಕೊಡಿಪೂಜೆ, ಮಹಾಪೂಜೆ, ಮಧ್ಯಾಹ್ನ ರಥಾರೋಹಣ ನಡೆದು ಸಂಜೆ ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪ್ರಮೋದ್‌ ರೈ ಪಳಜೆ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್‌ ಕುಮಾರ್‌ ಶೆಟ್ಟಿ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next