Advertisement
ಬೆಳಗ್ಗೆ 4 ಗಂಟೆಯಿಂದ ಜನಜಂಗುಳಿ, ವಾಹನ ದಟ್ಟಣೆ ಆರಂಭವಾಗುತ್ತದೆ. ಉಡುಪಿ ಜಿಲ್ಲೆಯಾದ್ಯಂತದಿಂದ ಮಾತ್ರವಲ್ಲದೆ ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶ್ರೀ ಕ್ಷೇತ್ರದ ದರ್ಶನಕ್ಕೆ ಬರುವುದು ಇಲ್ಲಿಯ ವಿಶೇಷ.
Related Articles
Advertisement
ಹನ್ನೆರಡು ಸಂಕ್ರಮಣ ವ್ರತ
ಸಂಕ್ರಮಣ ದೇವರು ಎಂದು ಪ್ರಸಿದ್ಧಿ ಪಡೆದ ಪೆರ್ಡೂರು ಕ್ಷೇತ್ರವು ವರ್ಷದ ಹನ್ನೆರಡು ರಾಶಿಗಳನ್ನು ಸೂರ್ಯ ಕ್ರಮಿಸುವ ಘಟ್ಟ ದಲ್ಲಿ ಅನಂತಪದ್ಮನಾಭ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಆರಾಧಿಸುವ ಪದ್ಧತಿ ಹಿಂದಿನಿಂದಲೂ ಇದೆ. ಶ್ರೀ ಕ್ಷೇತ್ರದಲ್ಲಿ 12 ಸಂಕ್ರಮಣಕ್ಕೆ ತಪ್ಪದೇ ಬಂದು ಭಗವಂತನ ದರ್ಶನ ಪಡೆದರೆ ಸಂಕಲ್ಪ ಈಡೇರಿಸುತ್ತಾನೆ ಎಂಬ ನಂಬಿಕೆ ಇದೆ. ಹಿಂದೆ ಪ್ರತಿ ಸಂಕ್ರಮಣದಂದು ಕಾಲ್ನಡಿಗೆಯಲ್ಲಿಯೇ ದೇವರ ದರ್ಶನ ಪಡೆಯುತ್ತಿದ್ದರು. ಈಗಲೂ ಹೆಚ್ಚಿನ ಭಕ್ತಾದಿಗಳು ನಿರಾಹಾರರಾಗಿ ಶ್ರೀ ಸನ್ನಿಧಿಗೆ ಬಂದು ಹಣ್ಣು ಕಾಯಿ ಸಮರ್ಪಿಸಿ ಭಕ್ತಿಯಿಂದ ದೇವರಲ್ಲಿ ಪ್ರಾಥಿಸಿ ವ್ರತಾವರಣೆಯಲ್ಲಿ ಪಾಲ್ಗೋಳ್ಳುತ್ತಾರೆ.
ಬಾಳೆಹಣ್ಣಿಗೊಲಿದ ಭಗವಂತನೆಂದೇ ಖ್ಯಾತಿ ಪಡೆದ ಕದಳಿಪ್ರಿಯ ಪೆರ್ಡೂರು ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವರಿಗೆ ಸುಮಾರು ಒಂದು ಸಾವಿರ ವರ್ಷಗಳಿಂದಲೂ ಭಕ್ತರಿಂದ ಬಾಳೆಹಣ್ಣಿನ ಸೇವೆ ಇಲ್ಲಿ ನಡೆದು ಬರುತ್ತಿದೆ. ತಮ್ಮ ಇಷ್ಟಾರ್ಥ ಸಿದ್ಧಿ ಸಂಕಲ್ಪಗಳಿಗೆ ಬಾಳೆಹಣ್ಣಿನ ಸೇವೆ ಸಲ್ಲಿಸುವುದು ಇಲ್ಲಿ ವಿಶೇಷ. ಅನಾರೋಗ್ಯದ ನಿವಾರಣೆಗೆ ಸಾವಿರ ಬಾಳೆಹಣ್ಣು , 500 ಬಾಳೆಹಣ್ಣು , ದಿನಕ್ಕೊಂದು ಬಾಳೆಹಣ್ಣು , ಸಿಬ್ಲಿ ಹಣ್ಣು ಹೀಗೆ ಬಾಳೆಹಣ್ಣಿನ ಹರಕೆ ಸೇವೆ ನಡೆಯುತ್ತಿದೆ. ಕಳೆದ ವರ್ಷ ಸುಮಾರು ಒಂದು ಲಕ್ಷಕೂ ಮಿಕ್ಕಿ ಬಾಳೆಹಣ್ಣು ಶ್ರೀ ದೇವರಿಗೆ ಸಮರ್ಪಿತಗೊಂಡಿದೆ.