ವಿಜಯಪುರ: ವಿಜಯಪುರ ಹಾಗೂ ಬಾಗಲಕೋಟೆ ಅವಳಿ ಜಿಲ್ಲೆಗಳ ವಿಧಾನ ಪರಿಷತ್ ಚುನಾವಣೆಗೆ ನೇಮಿಸಿರುವ ಚುನಾವಣಾ ಅಧಿಕಾರಿಗಳು ಪರಸ್ಪರ ಸಮನ್ವಯತೆ ಸಾಧಿ ಸಿ ಚುನಾವಣೆಯನ್ನು ಯಶಸ್ವಿಗೊಳಿಸಬೇಕು. ನಿರ್ಲಕ್ಷ್ಯ ತೋರಿದಲ್ಲಿ ಅಂಥವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಂದು ಜಿಲ್ಲಾ ಧಿಕಾರಿ ಪಿ.ಸುನಿಲಕುಮಾರ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಸಂವಾದ ಸಭಾಂಗಣದಲ್ಲಿ ಬುಧವಾರ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಚುನಾವಣಾ ಅ ಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ವಿಧಾನ ಪರಿಷತ್ ಚುನಾವಣೆಯನ್ನು ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಹೇಳಿದರು.
ಅದರಂತೆ ನಿಗದಿತ ಸಮಯದೊಳಗೆ ಮತದಾರರ, ಚಾಲ್ತಿ ಮೆಂಬರ್ಸ್, ಪರಿಷ್ಕೃತ ಯಾದಿಯನ್ನು ಒದಗಿಸಬೇಕು. ಅನರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡಬೇಕು. ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು ಎರಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಾಕಲಾಗಿರುವ ಬ್ಯಾನರ್, ಬಂಟಿಂಗ್ಸ್ ಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಬಾಗಲಕೋಟೆ ಜಿಲ್ಲೆಯ ಕರಡಿ ಮತಗಟ್ಟೆ ಕೇಂದ್ರವನ್ನು ಹೊರತುಪಡಿಸಿದರೆ ಅವಳಿ ಜಿಲ್ಲೆಗಳಲ್ಲಿ 37 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ದುರಸ್ತಿ ಮತಗಟ್ಟೆಗಳ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ ವರದಿ ನೀಡುವಂತೆ ಅವರು ಸೂಚಿಸಿದರು.
ಮೂರು ದಿನಗಗಳ ಒಳಗಾಗಿ ಮತದಾರರ ಪಟ್ಟಿಯನ್ನು ಹಾಗೂ ಎರಡು ದಿನಗಳ ಒಳಗೆ ಮತಗಟ್ಟೆ ಕೇಂದ್ರಗಳ ಸಮರ್ಪಕ ವರದಿ ಸಲ್ಲಿಸಸಬೇಕು. ಚುನಾವಣಾ ಕಾರ್ಯದಲ್ಲಿ ಬೇಜವಾಬ್ದಾರಿ ತೋರುವ, ನಿರ್ಲಕ್ಷé ವಹಿಸುವ, ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಒಂದು ವೇಳೆ ಅನಿವಾರ್ಯ ಕಾರಣಗಳಿಂದ ಮತಗಟ್ಟೆ ಕೇಂದ್ರಗಳ ಬದಲಾವಣೆ ಆದಲ್ಲಿ ಆ ಬಗ್ಗೆ ಕೂಡಲೇ ಅಧಿಕಾರಿಗಳು ವರದಿ ಸಲ್ಲಿಸುವಂತೆ ಸೂಚನೆ ನೀಡಿದರು. ಸಭೆಯಲ್ಲಿ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು.