Advertisement
ಕೊಳ್ಳೇಗಾಲ ತಾಲೂಕಿನ ಪ್ರವಾಹ ಪೀಡಿತ ಗ್ರಾಮಗಳು ಹಾಗೂ ನೆರೆ ಸಂತ್ರಸ್ತರಿಗೆ ತೆರೆದಿರುವ ಪರಿಹಾರ ಕೇಂದ್ರಗಳಿಗೆ ಸೋಮವಾರ ಭೇಟಿ ನೀಡಿದ ಬಳಿಕ ಕೊಳ್ಳೇಗಾಲ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪ್ರವಾಹ ಪರಿಹಾರ ಸಂಬಂಧ ನಡೆದ ಅಧಿಕಾರಿಗಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Related Articles
Advertisement
ಸ್ವಚ್ಛತಾ ಕೆಲಸ ನಿರ್ವಹಿಸಿ: ಪ್ರವಾಹಕ್ಕೆ ತುತ್ತಾಗಿರುವ ಪ್ರದೇಶಗಳಲ್ಲಿ ನೀರಿನ ಪ್ರಮಾಣ ತಗ್ಗಿದ ಕೂಡಲೇ ಪುನರ್ವಸತಿ, ಪರಿಹಾರ ಕೆಲಸಗಳನ್ನು ಹೊಣೆಗಾರಿಕೆಯಿಂದ ನಿರ್ವಹಿಸಬೇಕಾಗುತ್ತದೆ. ಮುಖ್ಯವಾಗಿ ರೋಗರುಜಿನಗಳು ಹರಡದಂತೆ ಸ್ವಚ್ಛ ತಾ ಕೆಲಸಗಳನ್ನು ನಿರ್ವ ಹಿಸಬೇಕಾಗುತ್ತದೆ. ಜಾನುವಾರುಗಳ ಆರೋಗ್ಯ ಕಾಪಾಡುವುದು ಸಹ ಪ್ರಮುಖ ಕೆಲಸವಾಗಿ ತೆಗೆದುಕೊಳ್ಳಬೇಕಿದೆ ಎಂದರು.
ಜಂಟಿಯಾಗಿ ಸಮೀಕ್ಷೆ ನಡೆಸಿ: ಹಾನಿಗೆ ಒಳಗಾದ ರಸ್ತೆಗಳನ್ನು ಸರಿಪಡಿಸುವುದು, ಕೃಷಿ, ಕಂದಾಯ ಇಲಾಖೆಗಳು ಜಂಟಿಯಾಗಿ ಸಮೀಕ್ಷೆ ನಡೆಸಿ ಬೆಳೆ ಹಾನಿ ವರದಿ ನೀಡುವುದು ಸೇರಿದಂತೆ ಇತರೆ ಅನೇಕ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೆತ್ತಿಕೊಳ್ಳಬೇಕು. ಪ್ರಸ್ತುತ ನೀರಿನ ಪ್ರಮಾಣ ಹೆಚ್ಚಳವಿರುವ ಹಿನ್ನಲೆಯಲ್ಲಿ ನದಿ, ಜಲಪಾತ ಪ್ರದೇಶಗಳಿಗೆ ಸಾರ್ವಜನಿಕರು ತೆರಳದಂತೆ ನೋಡಿಕೊಳ್ಳಬೇಕು ಎಂದು ಉಸ್ತುವಾರಿ ಕಾರ್ಯದರ್ಶಿ ತಿಳಿಸಿದರು.
ನೋಡಲ್ ಅಧಿಕಾರಿಗಳ ನೇಮಕ: ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಮಾತನಾಡಿ, ಪ್ರವಾಹ ಬಾಧಿತ ಪ್ರತಿ ಗ್ರಾಮಕ್ಕೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪರಿಹಾರ ಕೇಂದ್ರಗಳ ನಿರ್ವಹಣೆಗೆ ಸಹ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಸಂತ್ರಸ್ತ ಗ್ರಾಮಗಳು ಹಾಗೂ ಜನರ ರಕ್ಷಣೆ, ಆರೋಗ್ಯ, ಪರಿಹಾರ ಕಾರ್ಯಾಚರಣೆಗೆ ಎಲ್ಲಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ ಎಂದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್.ಲತಾ ಕುಮಾರಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧಿಕಾರಿ ಅನಿತಾ, ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.