Advertisement
ರಾಜಕಾರಣದಲ್ಲಿ ಪಾತ್ರಗಳನ್ನು ತೀರ್ಮಾನಿಸುವುದು ಜನ. ನಮಗೆ ವಿಪಕ್ಷವಾಗಿ ಜನ ತೀರ್ಮಾನ ಕೊಟ್ಟಿದ್ದಾರೆ. ಕಾಂಗ್ರೆಸ್ ಮೇಲೆ ಜನ ಬಹಳಷ್ಟು ವಿಶ್ವಾಸ ಇಟ್ಟಿದ್ದಾರೆ. ಗ್ಯಾರಂಟಿಗಳ ಮೇಲೆ ಜನರಿಗೆ ದೊಡ್ಡ ವಿಶ್ವಾಸ ಇದೆ. ಅದನ್ನು ಅವರು ಪೂರೈಸಬೇಕಾಗಿದೆ. ಆಗ ರಾಜ್ಯದ ಆರ್ಥಿಕ ಸ್ವಾಸ್ಥ್ಯ ಹಾಳಾಗದಂತೆ ನೋಡಿಕೊಳ್ಳುವುದು ಕೂಡ ಅವರ ಜವಾಬ್ದಾರಿ. ಯಾವ ರೀತಿ ನಿಭಾಯಿಸುತ್ತಾರೆ ಎಂಬುದನ್ನು ಕಾದು ನೋಡೋಣ ಎಂದು ತಿಳಿಸಿದರು.
ಸೋಲಿನ ಪರಾಮರ್ಶೆ ಬೇರೆ ಬೇರೆ ಹಂತದಲ್ಲಿ ನಡೆಯುತ್ತಿದೆ. 2-3 ದಿನಗಳಲ್ಲಿ ಶಾಸಕರ ಮತ್ತು ಪರಾಜಿತ ಅಭ್ಯರ್ಥಿಗಳ ಸಭೆ ಮಾಡುತ್ತೇವೆ. ಅದೇ ಸಭೆಯಲ್ಲಿ ವಿಪಕ್ಷ ನಾಯಕರ ತೀರ್ಮಾನ ಮಾಡುತ್ತೇವೆ. ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇಲ್ಲ. ಕೆಲವು ಕ್ಷೇತ್ರಗಳಲ್ಲಿ ರಾಜ್ಯ ಸರಕಾರದ ಕಾರ್ಯಕ್ರಮಗಳನ್ನು ತಲುಪಿಸುವಲ್ಲಿ ನಾವು ಹಿಂದೆ ಬಿದ್ದಿದ್ದು, ಚುನಾವಣ ತಯಾರಿಯಲ್ಲಿ ಕಾಂಗ್ರೆಸ್ ಮುಂದಿದ್ದಿದ್ದು ಸೋಲಿಗೆ ಕಾರಣವಾಗಿದೆ. ನಾವು ಆತ್ಮ ಸ್ಥೈರ್ಯ ಕಳೆದುಕೊಂಡಿಲ್ಲ. ಮತ್ತೆ ರಾಜ್ಯದಲ್ಲಿ ಪುಟಿದೇಳುತ್ತೇವೆ ಎಂದು ಅವರು ಹೇಳಿದರು.