ಚಿತ್ರದುರ್ಗ: ನಿಷ್ಠೆಯಿಂದ ಕೆಲಸ ಮಾಡಿದವರನ್ನು ಗುರುತಿಸಿದಲ್ಲಿ ಅವರು ಮತ್ತಷ್ಟು ಉತ್ತಮವಾಗಿ ಕೆಲಸ ಮಾಡಲು ಪ್ರೇರಣೆ ಪಡೆಯುತ್ತಾರೆ. ಹಾಗಾಗಿ ಚೆನ್ನಾಗಿ ಕೆಲಸ ಮಾಡುವವರನ್ನು ಗುರುತಿಸುವ ಕೆಲಸವಾಗಬೇಕು ಎಂದು ಜಿಲ್ಲಾ ಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.
2020-21ನೇ ಸಾಲಿನಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಪೊಲೀಸರಿಗೆ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿ ಇಲಾಖೆಯಲ್ಲೂ ಉತ್ತಮ ಕೆಲಸ ಮಾಡುವವರನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಇದರಿಂದ ಮತ್ತಷ್ಟು ಉತ್ತಮ ಕೆಲಸಗಳು ಆಗುತ್ತವೆ. ಕುಟುಂಬದ ಸದಸ್ಯರನ್ನು ಬಿಟ್ಟು ಕರ್ತವ್ಯ ಪ್ರಜ್ಞೆ ಮೆರೆಯುವ ಪೊಲೀಸ್ ಸಿಬ್ಬಂದಿಯನ್ನು ಗುರುತಿಸಿ ಬೆನ್ನು ತಟ್ಟಬೇಕು. ಆಗ ಅವರ ಕುಟುಂಬದವರಿಗೂ ಸಂತಸವಾಗುತ್ತದೆ. ಅವರೂ ಸಹ ಇವರ ಕೆಲಸಕ್ಕೆ ಬೆನ್ನೆಲುಬಾಗಿ ನಿಲ್ಲುತ್ತಾರೆ ಎಂದರು. ಚಿತ್ರದುರ್ಗ ಜಿಲ್ಲಾ ಪೊಲೀಸರು ದಕ್ಷತೆಯಿಂದ ಕೆಲಸ ಮಾಡುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹಲವು ಪ್ರಕರಣಗಳನ್ನು ಪತ್ತೆ ಮಾಡಿ ಆರೋಪಿಗಳನ್ನು ಬಂ ಧಿಸಿರುವುದೇ ಇದಕ್ಕೆ ಸಾಕ್ಷಿ. ಇತ್ತೀಚೆಗೆ ಬೇರೆ ಜಿಲ್ಲೆಯೊಂದರಲ್ಲಿ ಅಪರಾಧ ಪ್ರಕರಣವೊಂದು ನಡೆದಿತ್ತು. ಅದನ್ನು ಪತ್ತೆ ಹಚ್ಚುವಲ್ಲಿ ಕೊಂಚ ವಿಳಂಬ ಉಂಟಾಗಿತ್ತು. ಈ ಸಂದರ್ಭದಲ್ಲಿ ನಮ್ಮ ಪತಿ, ಈ ಪ್ರಕರಣವನ್ನು ಚಿತ್ರದುರ್ಗ ಜಿಲ್ಲಾ ಪೊಲೀಸರಿಗೆ ನೀಡಿದಲ್ಲಿ ಬೇಗ ಪತ್ತೆ ಮಾಡುತ್ತಾರೆ ಎಂದು ಹೇಳಿದ್ದನ್ನು ಸ್ಮರಿಸಿದರು.
ಜಿಪಂ ಸಿಇಒ ಡಾ| ಕೆ. ನಂದಿನಿದೇವಿ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ದಕ್ಷತೆಯಿಂದ ಕೆಲಸ ಮಾಡಿದವರನ್ನು ಗುರುತಿಸಿ ಬಹುಮಾನ ವಿತರಿಸುತ್ತಿರುವುದು ಉತ್ತಮ ಬೆಳೆವಣಿಗೆ. ಇದರಿಂದ ಅವರಿಗೆ ಮತ್ತಷ್ಟು ಸಾಧನೆ ಮಾಡಲು ಸ್ಫೂರ್ತಿ ದೊರೆತಂತಾಗುತ್ತದೆ. ಇದರಿಂದ ನಾವೂ ಸಹ ನಮ್ಮ ಇಲಾಖೆಯಲ್ಲಿ ಇದೇ ನೀತಿ ಅನುಸರಿಸಬೇಕು ಎನಿಸುತ್ತಿದೆ. ಇದೊಂದು ಉತ್ತಮ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಮಹಲಿಂಗ ನಂದಗಾವಿ ಹಾಗೂ ವಿವಿಧ ಹಂತದ ಪೊಲೀಸ್ ಅಧಿ ಕಾರಿಗಳು ಭಾಗವಹಿಸಿದ್ದರು. ಇಲಾಖೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಪೊಲೀಸರಿಗೆ ಬಹುಮಾನ ವಿತರಿಸಲಾಯಿತು.