Advertisement

ಪೆರಿಷಬಲ್‌ ಸರಕು ಸಾಗಣೆ: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೆ ಮೊದಲ ಸ್ಥಾನ

05:41 PM Sep 29, 2022 | Team Udayavani |

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಸತತ ಎರಡನೇ ಬಾರಿಗೆ ಪೆರಿಷಬಲ್‌ ಸರಕು ಸಾಗಣೆಯಲ್ಲಿ ದೇಶದಲ್ಲೇ ಮೊದಲ ಸ್ಥಾನ ಪಡೆದುಕೊಂಡಿದೆ.

Advertisement

ಕಳೆದ ವರ್ಷದಲ್ಲಿ 48,130 ಟನ್‌ಗಳಷ್ಟು ಸಾಗಣೆ ಮಾಡುವ ಮೂಲಕ ಮೊದಲ ಸ್ಥಾನದಲ್ಲಿತ್ತು. 2021-22 ಹಣಕಾಸು ವರ್ಷದಲ್ಲಿ 52,366 ಮೆಟ್ರಿಕ್‌ ಟನ್‌ನಷ್ಟು ಬೇಗ ಕ್ಷಯಿಸಬಲ್ಲ ಹಣ್ಣು, ತರಕಾರಿ, ಹೂ ನಂತಹ ಪೆರಿಷಬಲ್‌ ಸರಕು ಸಾಗಣೆ ಮಾಡುವ ಮೂಲಕ ಮತ್ತೊಮ್ಮೆ ಮೊದಲ ಸ್ಥಾನ ಪಡೆದುಕೊಂಡಿದೆ.

ಪ್ರತಿ ನಿತ್ಯ ಬೆಂಗಳೂರಿನಿಂದ 33 ಸರಕು ಸಾಗಣೆ ವಿಮಾನಗಳು ಲಂಡನ್‌, ಸಿಂಗಾಪುರ ಸೇರಿದಂತೆ ಒಟ್ಟು 48 ವಿದೇಶಗಳಿಗೆ ರಫ್ತು ಮಾಡುತ್ತಿದೆ. ದಕ್ಷಿಣ ಭಾರತದಿಂದಲೇ ಒಟ್ಟು ಶೇ.41ರಷ್ಟು ಪ್ರಮಾಣದಲ್ಲಿ ಪೆರಷಬಲ್‌ ಸರಕನ್ನು ರಫ್ತು ಮಾಡಲಾಗಿದೆ. ಅದರಲ್ಲಿ 36, 493 ಎಂ.ಟಿ. ಪೌಲ್ಟ್ರಿ ಹಾಗೂ 1,952 ಎಂ.ಟಿ.ಹೂಗಳನ್ನು ರಫ್ತು ಮಾಡಲಾಗಿದೆ ಎಂದು ಬಿಐಎಎಲ್‌ನ ಮುಖ್ಯ ಡೆವಲಪರ್‌ ಆಫೀಸರ್‌ ಸತ್ಯಕಿ ರಘುನಾಥ್‌ ತಿಳಿಸಿದ್ದಾರೆ.

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸರಕು ಸಾಗಣೆಯನ್ನು ಇನ್ನಷ್ಟು ಸುಲಭಗೊಳಿಸಲು ಏರ್‌ಪೋರ್ಟ್‌ ಕಾರ್ಗೋ ಕಮ್ಯುನಿಟಿ ಸಿಸ್ಟಂ (ಎಸಿಎಸ್‌)ನನ್ನು ಅಳವಡಿಸಿದ್ದು, ಇದು ಸರಕನ್ನು ಪತ್ತೆ ಮಾಡಲು ಸಹಾಯ ಮಾಡಲಿದ್ದು, ಅನವಶ್ಯಕ ಚೆಕ್ಕಿಂಗ್‌ ಇರುವುದಿಲ್ಲ. ಕೃಷಿ ಸಂಸ್ಕೃರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ, ಇಂಡಿಯನ್‌ ಕಸ್ಟಮ್ಸ್‌, ಪ್ಲಾಂಟ್‌ ಕ್ವಾರೆಂಟೈನ್‌ ಆಫೀಸ್‌ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಹಕಾರದಿಂದ ಇಂದು ಬಿಐಎಎಲ್‌ ಸರಕು ಸಾಗಣೆಯಲ್ಲಿ ದೇಶದಲ್ಲೇ ಮೊದಲ ಸ್ಥಾನ ಪಡೆದುಕೊಂಡಿದೆ ಎಂದು ಶ್ಲಾಘಿಸಿದರು.

ಎಪಿಇಡಿಎ ಅಧ್ಯಕ್ಷ ಡಾ.ಎಂ. ಅಂಗಮುತ್ತು ಮಾತನಾಡಿ, ಈ ವರ್ಷದ ಆಜಾದಿ ಕಾ ಅಮೃತ ಮಹೋತ್ಸವದ ಹಿನ್ನೆಯಲ್ಲಿ ಕೃಷಿ ಉತ್ಪನ್ನಗಳ ಸಾಗಣೆ ದೊಡ್ಡಮಟ್ಟದಲ್ಲಿ ಸಾಧನೆ ಮಾಡಿರುವುದು ದೇಶಕ್ಕೆ ಕೀರ್ತಿ ತಂದಿದೆ ಎಂದರು. ಪ್ರಸ್ತುತ ಬಿಐಎಎಲ್‌ನಲ್ಲಿ 60 ಸಾವಿರ ಎಂಟಿ ಸಾಮರ್ಥದ ಶೀತಲ ಸರಕನ್ನು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು, ಈ ಪ್ರಮಾಣವನ್ನು ಮುಂದಿನ ದಿನಗಳಲ್ಲಿ ಹೆಚ್ಚಿಸುವ ಇಂಗಿತ ಹೊಂದಿದ್ದೇವೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next