Advertisement
ವರದಿಯನ್ನು ಪರಿಶೀಲಿಸುವಂತೆ ಮುಖ್ಯಮಂತ್ರಿಗಳು ಮುಖ್ಯಕಾರ್ಯ ದರ್ಶಿಯವರಿಗೆ ನಿರ್ದೇಶನ ನೀಡಿದ್ದಾರೆ. 3 ಜಿಲ್ಲೆಗಳ ಸಚಿವರು ಹಾಗೂ ಶಾಸಕರು ಮುಖ್ಯಮಂತ್ರಿಯವರನ್ನು ಇದೇ ವಿಷಯವಾಗಿ ಭೇಟಿ ಮಾಡಲಿ ದ್ದೇವೆ ಎಂದರು.
ಕಾಸರಗೋಡಿನ ನೆಲ್ಲಿಕುನ್ನಿನಲ್ಲಿ ಸೀ ವೇವ್ ಬ್ರೇಕರ್ ಅಳವಡಿಸಿದ್ದಾರೆ. ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಅದೇ ತಂತ್ರಜ್ಞಾನವನ್ನು ಪ್ರಾಯೋಗಿಕವಾಗಿ ಉಳ್ಳಾಲ ಉಚ್ಚಿಲದ ಬಟ್ಟಪ್ಪಾಡಿಯಲ್ಲಿ ಅಳವಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಸಂಸ್ಥೆಯ ಅಧಿಕಾರಿಯನ್ನು ಸ್ಥಳಕ್ಕೆ ಕರೆದುಕೊಂಡು ಹೋಗಲಾಗಿತ್ತು. ಸ್ಥಳೀಯರ ವಿರೋಧದ ಕಾರಣ ಸದ್ಯ ಯಾವುದೇ ಪ್ರಗತಿ ಆಗಿಲ್ಲ. ಮರವಂತೆ ಯಲ್ಲಿ ಡಕ್‌ಫುಟ್ ತಂತ್ರಜ್ಞಾನವನ್ನು ಪ್ರಾಯೋಗಿಕವಾಗಿ ಜಾರಿಗೆ ತರಲು ಚಿಂತನೆ ಮಾಡುತ್ತಿದ್ದೇವೆ. ಸೀ ವೇವ್ ಬ್ರೇಕರ್ ತಂತ್ರಜ್ಞಾನ ಅಳವಡಿಸಲು ಪ್ರತೀ ಕಿ.ಮೀ.ಗೆ 25 ಕೋ.ರೂ. ಬೇಕಾಗುತ್ತದೆ. ಶಾಶ್ವತ ಯೋಜನೆಗೆ ಅನುದಾನವೂ ಹೆಚ್ಚು ಬೇಕಾಗುತ್ತದೆ. ಹೀಗಾಗಿ ಶಾಶ್ವತ ಹಾಗೂ ತಾತ್ಕಾಲಿಕ ಎರಡೂ ಪರಿಹಾರದ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ತಾಂತ್ರಿಕವಾಗಿ ಎಲ್ಲೆಲ್ಲಿ ಯಾವುದು ಸಾಧ್ಯವೋ ಆ ಯೋಜನೆಯನ್ನು ಅನುಷ್ಠಾನ ಮಾಡಲಿದ್ದೇವೆ. ಉಡುಪಿ, ಕುಂದಾಪುರ, ಬೈಂದೂರು ಹಾಗೂ ಕಾಪುವಿನಲ್ಲಿ ಕಡಲ್ಕೊರೆತ ಆಗುವ ಸ್ಥಳಗಳ ಪಟ್ಟಿಯನ್ನು ಮಾಡಲಾಗಿದೆ ಎಂದು ಹೇಳಿದರು.
Related Articles
ಹೆದ್ದಾರಿ ಸಹಿತವಾಗಿ ಕೆಲವು ಸರ್ವಿಸ್ ರಸ್ತೆ ಮತ್ತು ಚರಂಡಿ ವ್ಯವಸ್ಥೆಯನ್ನು ಸರಿಯಾಗಿ ನಿರ್ಮಾಣ ಮಾಡದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರಾಜ್ಯ ವಿವಿಧ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಕಾರ್ಯದರ್ಶಿಯವರಿಗೆ ವರದಿ ನೀಡಲಿದ್ದೇವೆ. ಮಳೆ ಹಾನಿ ಪರಿಶೀಲನೆ ಸಭೆಗೂ ಕೆಲವು ಅಧಿಕಾರಿಗಳು ಗೈರು ಹಾಜರಾಗಿದ್ದಾರೆ. ಸಂಬಂಧಪಟ್ಟ ಎಂಜಿನಿಯರ್‌ಗಳ ವಿರುದ್ಧವೂ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು. ಅಧಿಕಾರಿಗಳಿಂದ ಹೇಗೆ ಕೆಲಸ ಮಾಡಿಸಿಕೊಳ್ಳಬೇಕು ಎಂಬುದು ಸರಕಾರಕ್ಕೆ ಗೊತ್ತಿದೆ ಎಂದು ಎಚ್ಚರಿಕೆ ನೀಡಿದರು.
Advertisement
ಬೀದಿ ದೀಪದ ವ್ಯವಸ್ಥೆಮರವಂತೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀದಿ ದೀಪಗಳು ಇಲ್ಲದಿರುವುದರಿಂದ ಸವಾರರಿಗೆ ಸಮಸ್ಯೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಅಲ್ಲಿ ಸೂಕ್ತ ಬೀದಿ ದೀಪ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಶಾಸಕ ರಘುಪತಿ ಭಟ್ ಮಾತನಾಡಿ, ರಾ.ಹೆ.ಯಲ್ಲಿ ಟೋಲ್ ಪಡೆಯುತ್ತಿರುವುದರಿಂದ ನಿರ್ದಿಷ್ಟ ಕಾಲ ಮಿತಿಯಲ್ಲಿ ರಸ್ತೆ ಸಹಿತ ಮೂಲಭೂತ ಸಮಸ್ಯೆಯನ್ನು ಬಗೆಹರಿಸಲು ಟೋಲ್ ನಡೆಸುತ್ತಿರುವ ವರಿಗೆ ನಿರ್ದೇಶನ ನೀಡಿ ದ್ದೇವೆ. ಇಲ್ಲವಾದರೆ ಟೋಲ್ ಪಾವತಿಗೆ ಅವಕಾಶ ನೀಡುವು ದಿಲ್ಲ ಎಂಬ ಎಚ್ಚರಿಕೆ ಕೊಡಲಾಗಿದೆ ಎಂದರು.
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಎಸ್‌ಪಿ ವಿಷ್ಣುವರ್ಧನ, ಜಿ.ಪಂ.ಸಿಇಒ ಪ್ರಸನ್ನ ಎಚ್., ಶಾಸಕ ಸುಕುಮಾರ ಶೆಟ್ಟಿ ಉಪಸ್ಥಿತರಿದರು. ಭೂಕಂಪನ ಅಧ್ಯಯನಕ್ಕೆ ತಜ್ಞರ ತಂಡ
ಸುಳ್ಯ: ದಕ್ಷಿಣ ಕನ್ನಡ-ಕೊಡಗು ಗಡಿ ಪ್ರದೇಶದಲ್ಲಿ ನಿರಂತರ 6 ಬಾರಿ ಭೂಕಂಪನ ಸಂಭವಿಸಿದ ಹಿನ್ನೆಲೆಯಲ್ಲಿ ಅಧ್ಯಯನ ನಡೆಸಲು ತಜ್ಞರ ತಂಡವು ಎರಡು ದಿನಗಳಲ್ಲಿ ಇಲ್ಲಿಗೆ ಆಗಮಿಸಲಿದೆ ಎಂದು ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ತಿಳಿಸಿದರು. ಸುಳ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂ ಕುಸಿತದ ಬಗ್ಗೆ ತಜ್ಞರ ತಂಡವು ಈಗಾಲೇ ಕಲ್ಮಕಾರು, ಸಂಪಾಜೆಯಲ್ಲಿ ಅಧ್ಯಯನ ನಡೆಸಿದೆ ಎಂದರು. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ನ.ಪಂ. ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಕಾರ್ಯದರ್ಶಿ ಮುಳಿಯ ಕೇಶವ ಭಟ್ ಮೊದಲಾದವರು ಉಪಸ್ಥಿತರಿದ್ದರು.