Advertisement

ಸಮುದ್ರ ಕೊರೆತಕ್ಕೆ ಶಾಶ್ವತ ಪರಿಹಾರ: NGT ಗೆ ಅರ್ಜಿ ಸಲ್ಲಿಸಲು ಸಲಹೆ

11:09 PM Aug 17, 2023 | Team Udayavani |

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಬಟ್ಟಪ್ಪಾಡಿ ಸಹಿತ ರಾಜ್ಯದ ಕರಾವಳಿ ಭಾಗದ ಸಮುದ್ರ ಕೊರೆತಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇರಳದ ಮಾದರಿಯಲ್ಲಿ “ಸೀ ವೇವ್‌ ಬ್ರೇಕರ್‌’ (ಸಮುದ್ರ ಅಲೆ ತಡೆ) ವಿಧಾನ ಅನುಸರಿಸುವಂತೆ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿ ಬಗ್ಗೆ “ರಾಷ್ಟ್ರೀಯ ಹಸುರು ನ್ಯಾಯಾಧಿಕರಣದಲ್ಲಿ ಪರಿಹಾರ ಕಂಡುಕೊಳ್ಳುವಂತೆ ಅರ್ಜಿದಾರರಿಗೆ ಹೈಕೋರ್ಟ್‌ ಸಲಹೆ ನೀಡಿದೆ.

Advertisement

ಉಳ್ಳಾಲದ ಮೇಲಂಗಡಿ ನಿವಾಸಿ ಅಬ್ದುಲ್‌ ಖಾದರ್‌ ಜಿಲಾನಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ| ಪ್ರಸನ್ನ ಬಿ. ವರಾಲೆ ಹಾಗೂ ನ್ಯಾ| ಎಂ.ಜಿ.ಎಸ್‌. ಕಮಾಲ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.

ಅರ್ಜಿದಾರರ ಪರ ಅಬೂಬಕರ್‌ ಶಾಫಿ ಅವರ ವಾದವನ್ನು ಆಲಿಸಿದ ನ್ಯಾಯಪೀಠ, ಅರ್ಜಿಯಲ್ಲಿ ಹೇಳಲಾಗಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹಸುರು ನ್ಯಾಯಾಧಿಕರಣ ಸೂಕ್ತ ಹಾಗೂ ಸಕ್ಷಮ ವೇದಿಕೆಯಾಗಿದೆ. ಅರ್ಜಿದಾರರು ಎತ್ತಿರುವಂತಹ ಸಮಸ್ಯೆಗಳಿಗಾಗಿಯೇ ಹಸುರು ನ್ಯಾಯಾಧಿಕರಣದ ರಚನೆಯಾಗಿದೆ. ಆದ್ದರಿಂದ ಹಸುರು ನ್ಯಾಯಾಧಿಕರಣದಲ್ಲೇ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಅರ್ಜಿದಾರರಿಗೆ ಸಲಹೆ ನೀಡಿ ಅರ್ಜಿಯನ್ನು ಇತ್ಯರ್ಥಪಡಿಸಿತು.

Advertisement

Udayavani is now on Telegram. Click here to join our channel and stay updated with the latest news.

Next