Advertisement
ಶನಿವಾರ ಜಿ.ಪಂ. ಸಭಾಂಗಣದಲ್ಲಿ, ಜಿಲ್ಲೆಯ ಕಡಲತೀರಗಳಲ್ಲಿ ತ್ಯಾಜ್ಯ ನಿರ್ವಹಣೆ ಸಮರ್ಪಕವಾಗಿ ನಿರ್ವಹಣೆ ಮಾಡುವ ಕುರಿತಂತೆ ಪಿಡಿಒಗಳಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Related Articles
ಬೀಚ್‌ಗಳಲ್ಲಿ ತ್ಯಾಜ್ಯ ಎಸೆಯುವರ ಕುರಿತು ನಿಗಾ ವಹಿಸಬೇಕು. ಅವರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವಂತೆ ಹಾಗೂ ಈ ಕುರಿತಂತೆ ಪಿಡಿಒ ಗಳು ತಮಗೆ ನೀಡಿರುವ ಅಧಿಕಾರವನ್ನು ಸೂಕ್ತ ರೀತಿಯಲ್ಲಿ ಬಳಸುವಂತೆ ತಿಳಿಸಿದರು.
Advertisement
ಮೀನುಗಾರಿಕೆಗೆ ತೆರಳುವ ಮೀನುಗಾರರು ಸಮುದ್ರದಲ್ಲಿ ಯಾವುದೇ ತ್ಯಾಜ್ಯವನ್ನು ಎಸೆಯದಂತೆ ಮತ್ತು ಹರಿದ ಮೀನಿನ ಬಲೆ ಮತ್ತಿತರ ಅನುಪಯುಕ್ತ ವಸ್ತುಗಳನ್ನು ದಡಕ್ಕೆ ಬಂದು ಸಮರ್ಪಕ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಮೀನುಗಾರಿಕೆ ಇಲಾಖೆ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದರು.
ಜಿಲ್ಲೆಯಲ್ಲಿ 15 ದಿನಗಳ ಒಳಗೆ ಪೈಲಟ್ ಯೋಜನೆಯಾಗಿ ಯಾವುದಾದರೊಂದು ಕಡಲತೀರದ ಗ್ರಾ.ಪಂ.ನಲ್ಲಿ ತ್ಯಾಜ್ಯ ನಿರ್ವಹಣೆಗೆ ಶಾಶ್ವತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕ್ಲಿಫರ್ಡ್ ಲೋಬೊ, ವಿವಿಧ ಸೇವಾ ಸಂಘಟನೆಗಳ ಪ್ರತಿನಿಧಿಗಳ, ಕಡಲತೀರ ವ್ಯಾಪ್ತಿಯ ಗ್ರಾ.ಪಂ.ಗಳ ಪಿಡಿಒಗಳು ಉಪಸ್ಥಿತರಿದ್ದರು.