Advertisement
ಕಳೆದ ದಶಕದ ಹಿಂದೆಯೇ 130 ಪ್ರೌಢಶಾಲೆ ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮೋದನೆ ನೀಡಿದೆಯಾದರೂ, ಅಭ್ಯರ್ಥಿಗಳಿಗೆ ಆದೇಶ ಪತ್ರ ನೀಡುವಲ್ಲಿ ವಿಳಂಬವಾಗುತ್ತಿದ್ದು, ಶಿಕ್ಷಕರ ಕೊರತೆಯ ಪ್ರಮಾಣ ಮತ್ತಷ್ಟು ಹೆಚ್ಚಲು ಕಾರಣವಾಗಿದೆ. ಪರಿಣಾಮ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಲು ಹಿಂದೇಟು ಹಾಕುವಂತಾಗಿದ್ದು, ಶಿಕ್ಷಕರ ಕೊರತೆ ನೀಗಿಸಲು ಮತ್ತು ಮಕ್ಕಳ ಪಾಠಗಳನ್ನು ಪೂರ್ಣಗೊಳಿಸಲು ಈ ಹಿಂದಿನಂತೆ ಈ ಬಾರಿಯೂ ಅತಿಥಿ ಶಿಕ್ಷಕರೇ ಆಸರೆಯಾಗುವ ಸಾಧ್ಯತೆಯಿದೆ.
ಕೊರತೆಯನ್ನು ಎದುರಿಸುತ್ತಿದೆ. ಪರಿಣಾಮ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಿದ್ದು, ಖಾಸಗಿ ಶಾಲೆಗಳಲ್ಲಿ ಹೆಚ್ಚಲು ಕಾರಣವಾಗುತ್ತಿದೆ.
Related Articles
Advertisement
ಈ ಕೊರತೆಯನ್ನು ನೀಗಿಸಲು ಮುಂದಾಗಿರುವ ಸರ್ಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಕಳೆದ ಕೆಲ ವರ್ಷಗಳಿಂದ ಅತಿಥಿ ಶಿಕ್ಷಕರನ್ನು ಮೊರೆ ಹೋಗುತ್ತಿದ್ದು, ಕಳೆದ ವರ್ಷ 115 ಅತಿಥಿ ಶಿಕ್ಷಕರು ಕಾರ್ಯನಿರ್ವಹಿಸಿದ್ದಾರೆ. ಪ್ರಸಕ್ತ ಶೈಕ್ಷಣಿಕ ವರ್ಷವೂ ಅವರೇ ಆಸರೆಯಾಗಲಿದ್ದಾರೆ. ಅಲ್ಲದೇ, ಜಿಲ್ಲೆಯ ಶೈಕ್ಷಣಿಕ ಫಲಿತಾಂಶ ಹೆಚ್ಚಿಸುವ ಸಲುವಾಗಿ ಜಿಲ್ಲಾಡಳಿತ ಕಳೆದ ಎರಡು ವರ್ಷಗಳಿಂದ ಅಬ್ದುಲ್ ಕಲಾಂ ಗೌರವ ಸೇವೆ ಯೋಜನೆಯಡಿ ಶಿಕ್ಷಕರನ್ನು ನಿಯೋಜಿಸಲಾಗುತ್ತಿದೆ. ಜತೆಗೆ ಎಚ್‌ಕೆಡಿಬಿ ಯೋಜನೆಯಡಿ ವಿಶೇಷ ಶಿಕ್ಷಕರನ್ನು ನಿಯೋಜನೆ ಮಾಡಲಾಗುತ್ತಿದೆ. ಶಿಕ್ಷಕರ ಕೊರತೆ ನೀಗಿಸಲು ಕೇವಲ ತಾತ್ಕಾಲಿಕ ಪರಿಹಾರ ಕಂಡುಕೊಳ್ಳುತ್ತಿರುವ ಸರ್ಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಕಾಯಂ ಶಿಕ್ಷಕರನ್ನು ನೇಮಿಸುವಲ್ಲಿ ಮಾತ್ರ ನಿರ್ಲಕ್ಷ್ಯ ತೋರುತ್ತಿರುವುದು ವಿಪರ್ಯಾಸವಾಗಿದೆ.
ಶಾಲೆಗೆ ಎತ್ತಿನ ಬಂಡಿಯಲ್ಲಿ ಬಂದ ಮಕ್ಕಳು ಕಂಪ್ಲಿ: ತಾಲೂಕಿನ ಹೊಸೂರು ಜವುಕು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬುಧವಾರ ವಿದ್ಯಾರ್ಥಿಗಳು ಅಲಂಕೃತ ಎತ್ತಿನ ಬಂಡಿಯಲ್ಲಿ ಬರುವ ಮೂಲಕ ಶಿಕ್ಷಕರು ಹಾಗೂ ಸಾರ್ವಜನಿಕರ ಗಮನ ಸೆಳೆದರು. ಎರಡು ತಿಂಗಳ ಬೇಸಿಗೆ ರಜೆಯ ನಂತರ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಶಾಲೆಯ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಪದಾಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳ ಸಹಕಾರದೊಂದಿಗೆ ಶಿಕ್ಷಕರು ರೈತರ ಎತ್ತಿನ ಬಂಡಿ ಪಡೆದು ಅವುಗಳನ್ನು ವಿಶೇಷವಾಗಿ ಸಿಂಗರಿಸಿ ವಿದ್ಯಾರ್ಥಿಗಳ ಮನೆಗಳಿಗೆ ತೆಗೆದುಕೊಂಡು ಹೋಗಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬಂದರು. ಇದರಿಂದ ವಿದ್ಯಾರ್ಥಿಗಳ ಪಾಲಕರು ಹಾಗೂ ಪೋಷಕರು ತಮ್ಮ ಮಕ್ಕಳಿಗೆ ನಮ್ಮ ಪುರಾತನ ಸಂಸ್ಕೃತಿಯ ಪ್ರತೀಕಗಳಾದ ಎತ್ತಿನ ಬಂಡಿಗಳ ಮೂಲಕ ಕರೆದುಕೊಂಡು ಹೋಗುವುದನ್ನು ನೋಡಿ ಸಂತಸ ಪಟ್ಟರು. ಪ್ರಾರಂಭೋತ್ಸವದ ಪ್ರಯುಕ್ತ ಶಾಲಾ ಕೊಠಡಿ, ಆವರಣ ಮತ್ತು ಪ್ರವೇಶದ್ವಾರ ತಳಿರು ತೋರಣಗಳಿಂದ ಅಲಂಕರಿಸಿ ಶಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಿಸಲಾಗಿತ್ತು. ಈ ಸಂದರ್ಭದಲ್ಲಿ ತಾಪಂ ಸದಸ್ಯ ಎಚ್. ಈರಣ್ಣ, ಪಾಲಕರು ಹಾಗೂ ಪೋಷಕರು ತಮ್ಮ ಮಕ್ಕಳನ್ನು ತಪ್ಪದೆ ಶಾಲೆಗೆ ಕಳುಹಿಸಬೇಕು. ಸರ್ಕಾರದ ವಿವಿಧ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕೆಂದು ಮನವಿ ಮಾಡಿದರು. ಎಸ್‌ಡಿಎಂಸಿ ಅಧ್ಯಕ್ಷ ಯಲ್ಲಪ್ಪ, ಸದಸ್ಯರಾದ ಪಂಪಾಪತಿ, ರಾಮಪ್ಪ, ರಾಜಶೇಖರ್, ಯಂಕಪ್ಪ, ರಾಮಾಂಜಿನಿ,ವೆಂಕಟೇಶ್, ಗ್ರಾಪಂ ಸದಸ್ಯರಾದ ನೇಮಕಲ್ಲಪ್ಪ, ಮಾರುತಿ, ಶಿಕ್ಷಕರಾದ ಶಂಕರ್, ಮಾಲಿಕ್ ಇನ್ನಿತರರಿದ್ದರು. ಜಿಲ್ಲೆಯಲ್ಲಿ ಕಿರಿಯ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾಯಂ ಶಿಕ್ಷಕರ ಕೊರತೆ ಉದ್ಭವಿಸಲ್ಲ. ಶಿಕ್ಷಕರ ಕೊರತೆಯಿರುವ ಶಾಲೆಗಳಲ್ಲಿ ಅತಿಥಿ ಶಿಕ್ಷಕರನ್ನು ನಿಯೋಜಿಸಲಾಗುತ್ತದೆ. ಸದ್ಯ ಪ್ರೌಢಶಾಲೆಗಳಿಗೆ 90 ಅತಿಥಿ ಶಿಕ್ಷಕರ ಅಗತ್ಯವಿದೆ. ಅವಶ್ಯಕತೆ ಇರುವ ಶಾಲೆಗಳಿಗೆ ಅಗತ್ಯತೆಗೆ ತಕ್ಕಷ್ಟು ಶಿಕ್ಷಕರನ್ನು ನಿಯೋಜಿಸಲಾಗುತ್ತದೆ. ಹೊಸ ಸರ್ಕಾರ ಬಂದಿರುವುದರಿಂದ ಈ ಬಗ್ಗೆ ಇನ್ನು ಚರ್ಚೆಯಾಗಿಲ್ಲ. ಮುಂದಿನ ತಿಂಗಳು ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಈ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಶ್ರೀಧರನ್, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬಳ್ಳಾರಿ ವೆಂಕೋಬಿ ಸಂಗನಕಲ್ಲು