Advertisement

ಚಿಕ್ಕಮಗಳೂರು: ನೂತನ ಡಿಸಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ಅನುಮತಿ

02:07 PM Aug 01, 2020 | mahesh |

ಚಿಕ್ಕಮಗಳೂರು: ದಂಟರಮಕ್ಕಿ ತೋಟಗಾರಿಕೆ ಇಲಾಖೆ ಜಾಗದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ತೋಟಗಾರಿಕೆ ಇಲಾಖೆಯಿಂದ ಅನುಮತಿ ನೀಡಿದ್ದು ಕಂದಾಯ ಇಲಾಖೆ ತೋಟಗಾರಿಕೆ ಇಲಾಖೆ ಬದಲಿ ಜಾಗ ನೀಡುವಂತೆ ಆದೇಶ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ತಿಳಿಸಿದ್ದಾರೆ.

Advertisement

ಗುರುವಾರ ಬೆಂಗಳೂರು ವಿಧಾನಸೌಧದಲ್ಲಿ ತೋಟಗಾರಿಕೆ ಇಲಾಖೆ ಸಚಿವ ನಾರಾಯಣಗೌಡ, ಕಂದಾಯ ಸಚಿವ ಆರ್‌. ಅಶೋಕ್‌ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆದೇಶ ನೀಡಿರುವುದಾಗಿ ಹೇಳಿದ್ದಾರೆ. ನಗರದ ಹೊರವಲಯದಲ್ಲಿರುವ ಪವಿತ್ರ ವನದಲ್ಲಿ ಸುಮಾರು 80 ಕೋಟಿ ರೂ. ವೆಚ್ಚದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಅನುಮತಿ ನೀಡಿ ಮೊದಲ ಹಂತದಲ್ಲಿ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿತ್ತು. ನೂತನ ಕಟ್ಟಡ ಕಾಮಗಾರಿ ಆರಂಭಗೊಂಡಿದ್ದು, ಅರ್ಧ ಭಾಗದಷ್ಟು ಕಾಮಗಾರಿಯೂ ನಡೆದಿದೆ.

ಗುತ್ತಿಗೆದಾರನಿಗೆ 3 ಕೋಟಿ ರೂ. ಹಣವನ್ನು ಈಗಾಗಲೇ ನೀಡಲಾಗಿದೆ. ಜಿಲ್ಲಾ ಧಿಕಾರಿಗಳ ನೂತನ ಕಟ್ಟಡ ಜಾಗದಲ್ಲಿ ಖಾಸಗಿಯವರಿಗೆ ಸೇರಿದ ಜಮೀನು ಒಳಗೊಂಡಿದ್ದು, ಖಾಸಗಿ ಜಮೀನು ಮಾಲೀಕ ನ್ಯಾಯಾಲಯದ ಮೆಟ್ಟಿಲೇರಿದೆ. ಕಟ್ಟಡ ನಿರ್ಮಾಣ ಕಾಮಗಾರಿಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಈ
ಹಿನ್ನೆಲೆಯಲ್ಲಿ ಕಟ್ಟಡ ಕಾಮಗಾರಿಯೂ ಅರ್ಧಕ್ಕೆ ನಿಂತಿದೆ. ನೂತನ ಜಿಲ್ಲಾ  ಧಿಕಾರಿ ಕಚೇರಿ ಕಟ್ಟಡ ನಗರದ ಹೊರವಲಯದಲ್ಲಿರುವುದರಿಂದ ಸಾರ್ವಜನಿಕರು ತಮ್ಮ ಕೆಲಸ- ಕಾರ್ಯಗಳಿಗೆ ತೆರಳಲು ತೊಂದರೆ ಯಾಗುತ್ತದೆ ಎಂಬ ದೂರುಗಳು ಇದ್ದವು. ನಗರ ಸಮೀಪದಲ್ಲಿ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ನಿರ್ಮಾಣ ಮಾಡಬೇಕೆಂದು ಅನೇಕ ಹೋರಾಟಗಳು ನಡೆದಿದ್ದವು. ನೂತನವಾಗಿ ನಿರ್ಮಾಣ  ವಾಗುತ್ತಿರುವ ಜಿಲ್ಲಾಧಿಕಾರಿ ಕಚೇರಿ ನಗರದಿಂದ ದೂರದಲ್ಲಿದ್ದು,
ಸಾರ್ವಜನಿಕರಿಗೆ ತೊಂದರೆಯಾಗಲಿದೆ.

ಈ ಹಿನ್ನೆಲೆಯಲ್ಲಿ ನಗರದ ಹೃದಯ ಭಾಗದಲ್ಲಿರುವ ದಂಟರಮಕ್ಕಿಯಲ್ಲಿರುವ ತೋಟಗಾರಿಕೆ ಇಲಾಖೆ 8.5 ಎಕರೆ ಜಾಗದಲ್ಲಿ ಜಿಲ್ಲಾಧಿಕಾರಿ ಕಚೇರಿ ನಿರ್ಮಾಣಕ್ಕೆ ಅವಕಾಶ ಕಲ್ಪಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆ  ಪ್ರವಾಸ ಕೈಗೊಂಡಿದ್ದ ಕಂದಾಯ ಸಚಿವ ಆರ್‌. ಅಶೋಕ್‌ ಅವರಿಗೆ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ತೋಟಗಾರಿಕೆ ಸಚಿವ ನಾರಾಯಣಗೌಡ, ಕಂದಾಯ ಸಚಿವ ಆರ್‌. ಅಶೋಕ್‌ ಅವರ ನೇತೃತ್ವದಲ್ಲಿ ಸಭೆ
ನಡೆದಿದ್ದು, ದಂಟರಮಕ್ಕಿ ತೋಟಗಾರಿಕೆ ಇಲಾಖೆ ಜಾಗದಲ್ಲಿ ಜಿಲ್ಲಾಧಿಕಾರಿ ಕಟ್ಟಡ ನಿರ್ಮಾಣಕ್ಕೆ ತೋಟಗಾರಿಕೆ ಇಲಾಖೆ ಅನುಮತಿ ನೀಡಿದ್ದು, ತೋಟಗಾರಿಕೆ
ಇಲಾಖೆಗೆ ಕಂದಾಯ ಇಲಾಖೆಗೆ ಬದಲಿ ಜಾಗ ನೀಡುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ,
ಮೂಡಿಗೆರೆ ಕ್ಷೇತ್ರದ ಶಾಸಕ ಎಂ. ಪಿ. ಕುಮಾರಸ್ವಾಮಿ, ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ ಡಿ.ಎನ್‌. ಜೀವರಾಜ್‌ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next