ಬೆಂಗಳೂರು: ರಾಜ್ಯದ ನೀರಾವರಿ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ನೀರಾವರಿ ಇಲಾಖೆಯಲ್ಲಿ 400 ಎಂಜಿನಿಯರ್‌ಗಳ ನೇಮಕಕ್ಕೆ ಅನುಮತಿ ನೀಡಲಾಗಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
Advertisement
ಸುದ್ದಿಗಾರರ ಜತೆ ಮಾತನಾಡಿದ ಅವರು, ನೀರಾವರಿ ಇಲಾಖೆಯಲ್ಲಿ ಅನೇಕ ವರ್ಷಗಳಿಂದ ಅಸಿಸ್ಟೆಂಟ್ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ನೇಮಕ ಆಗಿಲ್ಲ.
ಸಾವಿರ ಹುದ್ದೆ ನೇಮಕವಾಗಬೇಕಾಗಿದೆ. ಈ ಹಿನ್ನೆಲೆ ಯಲ್ಲಿ ಈಗ 300 ಅಸಿಸ್ಟೆಂಟ್ ಎಂಜಿನಿಯರ್ ಹಾಗೂ 100 ಜೂನಿಯರ್ ಎಂಜಿನಿಯರ್‌ಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.