Advertisement

Pernankila ಶ್ರೀ ಮಹಾಲಿಂಗೇಶ್ವರ – ಮಹಾಗಣಪತಿ ದೇವಾಲಯ; “ಭಕ್ತಿ – ಗಾನ – ಸಿಂಚನ’ಕ್ಕೆ ಚಾಲನೆ

11:52 PM Mar 24, 2024 | Team Udayavani |

ಉಡುಪಿ: ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ – ಮಹಾಗಣಪತಿ ದೇವಾಲಯದ ಜೀರ್ಣೋದ್ಧಾರದ ಪ್ರಯುಕ್ತ ವೀಕ್ಷಿತ್‌ ಕೊಡಂಚ ಮತ್ತು ಬಳಗದಿಂದ “ಭಕ್ತಿ ಗಾನ ಸಿಂಚನ’- ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಕಾರ್ಯಕ್ರಮಕ್ಕೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಶನಿವಾರ ಚಾಲನೆ ನೀಡಿದರು.

Advertisement

ಅಯೋಧ್ಯೆಯ ಬಾಲರಾಮ, ಪೇಜಾವರ ಮಠದ ಹಿರಿಯ ಯತಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಚಿತ್ರಗಳನ್ನು ಶ್ರೀಪಾದರ ಸಮ್ಮುಖದಲ್ಲಿ ಬಿಡಿಸಲಾಯಿತು. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಿದ್ವಾನ್‌ ಹರಿದಾಸ್‌ ಭಟ್‌ ಅಧ್ಯಕ್ಷತೆ ವಹಿಸಿದ್ದರು.

ಪೇಜಾವರ ಮಠದ ದಿವಾನ ಎಂ. ರಘುರಾಮ ಆಚಾರ್ಯ, ಕಾರ್ಯ ನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಭಟ್‌, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀಶ ನಾಯಕ್‌, ಸಮಿತಿ ಸಂಘಟನ ಕಾರ್ಯದರ್ಶಿ ಸದಾನಂದ ಪ್ರಭು, ಉಪಾಧ್ಯಕ್ಷ ಶ್ರೀಕಾಂತ್‌ ನಾಯಕ್‌ ಅಲೆವೂರು, ಅನಿಲ್‌ ಶೆಟ್ಟಿ, ಗುರುದಾಸ್‌ ಭಂಡಾರಿ, ಸುಹಾಸ್‌ ಹೆಗ್ಡೆ ಉಪಸ್ಥಿತರಿದ್ದರು. ಕಾರ್ಯದರ್ಶಿ ಉಮೇಶ್‌ ನಾಯಕ್‌ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಇಂದು ಶ್ರೀ ಮಹಾಲಿಂಗೇಶ್ವರ ದೇವರ ಬಿಂಬ ಪ್ರತಿಷ್ಠೆ
ಸೋಮವಾರ ಶ್ರೀ ಮಹಾಲಿಂಗೇಶ್ವರ ದೇವರ ಬಿಂಬ ಪ್ರತಿಷ್ಠೆ, ಪುಣ್ಯಾಹವಾಚನ, ಗಣಪತಿ ಯಾಗ, ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಕಲಶಾಭಿಷೇಕ ಪ್ರಾರಂಭ, ಶ್ರೀ ಮಹಾಗಣಪತಿ ದೇವರಿಗೆ ಬ್ರಹ್ಮಕುಂಭಾಭಿಷೇಕ, ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ಸಾಮಾನ್ಯ ಪ್ರಾಯಶ್ಚಿತ್ತ ಹೋಮ, ಅಷ್ಠಬಂಧ ಪ್ರತಿಷ್ಠೆ, ಪ್ರತಿಜ್ಞಾ ವಿಧಿ, ಅನ್ನಸಂತರ್ಪಣೆ, ದಿಶಾಹೋಮ, ಬಲಿಶಿಲಾ ಪ್ರತಿಷ್ಠೆ, ಅಧಿವಾಸ ಹೋಮ, ಧ್ವಜಕಲಶಾಭಿಷೇಕ, ಭೂತರಾಜರ ಪೂಜೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next