Advertisement
ರೈತ ಲಿಂಗರಾಜು ಮಾತನಾಡಿ, ಎರಡೂ ಮೂರು ದಿನಗಳಿಂದ 32 ಕ್ಕೂ ಹೆಚ್ಚು ಆನೆಗಳು ಪಾಳ್ಯ ಹೋಬಳಿಯ ಅರೆಹಳ್ಳದ ಕೊಪ್ಪಲು, ಚಿಗಳೂರು, ನಿಡನೂರು, ಸಿಂಗೊಡ್ನಹಳ್ಳಿ ಗ್ರಾಮ ಸೇರಿದಂತೆ ಈ ಭಾಗಗಳಲ್ಲಿ ಬೀಡು ಬಿಟ್ಟಿದ್ದು, ವಡೆಗೆ ಬಂದಿರುವ ಭತ್ತದ ಬೆಳೆಗಳನ್ನು ಸಂಪೂರ್ಣವಾಗಿ ತಿಂದು ಹಾಕಿವೆ. ರೈತರು ಬೆಳೆರಕ್ಷಣೆ ಮಾಡಲಾಗದೆ ಕಂಗಾಲಾಗಿದ್ದಾರೆ. ಜನರು ಕಾಡಾನೆಗಳ ಹಾವಳಿಯನ್ನು ತಡೆಯಲು ಎಷ್ಟೇ ಪ್ರತಿಭಟನೆ ಮಾಡಿದರೂ ಅರಣ್ಯ ಇಲಾಖೆ ಶಾಶ್ವತ ಪರಿಹಾರ ಕಂಡುಹಿಡಿಯಲು ವಿಫಲವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Related Articles
Advertisement
ಮರಿಗಳು ಸೇರಿದಂತೆ ಬರೋಬ್ಬರಿ 25 ರಿಂದ 30 ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ಲಗ್ಗೆಯಿಟ್ಟು ದಾಂಧಲೆ ನಡೆಸಿ ಹತ್ತರು ಎಕರೆ ಕಾಫಿ ಬೆಳೆಯನ್ನು ನಾಶ ಮಾಡಿರುವ ಘಟನೆ ತಾಲೂಕಿನ ಅಬ್ಬನ ಗ್ರಾಮದಲ್ಲಿ ನಡೆದಿದೆ. ಅಬ್ಬನ ಗ್ರಾಮ ಹಾಗೂ ಸುತ್ತಲಿನ ನೂರಾರು ಎಕರೆಯಲ್ಲಿದ್ದ ಕಾಫಿ -ಮೆಣಸು-ಅಡಿಕೆ ಹಾಗೂ ಬಾಳೆ ನಾಶವಾಗಿದೆ.
ಅಷ್ಟು ದೊಡ್ಡ ಆನೆಗಳ ಗುಂಪು ದಾಳಿ ಮಾಡುವುದಿರಲಿ, ತೋಟದಲ್ಲಿ ಸುಮ್ಮನೆ ನಡೆದು ಹೋದರೂ ಬೆಳೆ ಸಂಪೂರ್ಣ ನಾಶವಾಗುತ್ತದೆ. ಗ್ರಾಮದ ಚಂದ್ರ ಶೆಟ್ಟಿ, ಕೃಷ್ಣಯ್ಯ, ಶ್ರೀನಿವಾಸ್ ಸೇರಿದಂತೆ ಹತ್ತಾರು ಜನರ ತೋಟಗಳ ಪರಿಸ್ಥಿತಿ ಇದೇ ಆಗಿದೆ. ಆನೆಗಳ ದಾಳಿಯಿಂದ ತೋಟದ ಸ್ಥಿತಿ ಕಂಡ ಸ್ಥಳೀಯರು ಅರಣ್ಯ ಇಲಾಖೆಗೆ 3-4 ಬಾರಿ ಕರೆ ಮಾಡಿದ್ದು, ಸ್ಪಂದಿಸಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಆನೆಗಳನ್ನ ಕಾಡಿಗಟ್ಟಿ ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.