Advertisement
ಮಹದೇವಪುರ ಕ್ಷೇತ್ರದ ಗರುಡಾಚರ ಪಾಳ್ಯ ವಾರ್ಡ್ನ ಸೀತಾರಾಮಪಾಳ್ಯ, ಬಸವಣ್ಣನಗರ, ಹೂಡಿ, ಗರುಡಾಚಾರ ಪಾಳ್ಯ, ಕಾವೇರಿನಗರ ಸೇರಿ ವಿವಿಧೆಡೆ ಚುನಾವಣಾ ಪ್ರಚಾರ ಕೈಗೊಂಡು ಮತಯಾಚಿಸಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರು ದಲಿತರಿಗೆ ಕಲ್ಪಿಸಿರುವ ಮೀಸಲಾತಿ ಹಕ್ಕನ್ನು ಕಸಿದುಕೊಂಡಿರುವ ರಾಷ್ಟ್ರೀಯ ಪಕ್ಷಗಳು, ನಿರಂತರ ದೌರ್ಜನ್ಯ ಎಸಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.
1.50 ಲಕ್ಷಕ್ಕೂ ಹೆಚ್ಚು ಜನ ವಾಸವಿದ್ದಾರೆ. ಆದರೂ ಕ್ಷೇತ್ರದಲ್ಲಿ ಸ್ಥಳೀಯ ಅಭ್ಯರ್ಥಿ ಗಳಿಗೆ ರಾಷ್ಟ್ರೀಯ ಪಕ್ಷಗಳು ಟಿಕೆಟ್
ನೀಡಿಲ್ಲ. ಈ ಮೂಲಕ ಶೋಷಿತ ವರ್ಗದ ವರಿಗೆ ರಾಜಕೀಯ ನೀಡುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯವನ್ನು ರಾಷ್ಟ್ರೀಯ ಪಕ್ಷಗಳು ಕಡೆಗಣಿಸಿವೆ. ಈ ಬಾರಿ ಮಹದೇವಪುರ ಕ್ಷೇತ್ರದ ಜನತೆ ರಾಷ್ಟ್ರೀಯ ಪಕ್ಷಗಳಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.