Advertisement

ಬಿಎಸ್‌ ವೈ ಮತ್ತು ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ: ಕುಮಾರಸ್ವಾಮಿ

01:19 PM Dec 05, 2021 | Team Udayavani |

ಮೈಸೂರು: ಬಿಎಸ್‌ ಯಡಿಯೂರಪ್ಪ ಮತ್ತು ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ. ಈವರೆಗೆ ಬಿಎಸ್‌ವೈ ಮಾತ್ರ ನನಗೆ ಕರೆ ಮಾಡಿ ಬೆಂಬಲ ಕೇಳಿದ್ದಾರೆ. ಸಿಎಂ ಬೊಮ್ಮಾಯಿ ಕೂಡ ಅದು ಅವರ ವೈಯಕ್ತಿಕ ಹೇಳಿಕೆ ಎಂದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಹಿರಂಗವಾಗಿಯೇ ನಮಗೆ ಯಾರ ಬೆಂಬಲ ಬೇಡ ಎಂದಿದ್ದಾರೆ. ಬೇಡ ಎಂದವರಿಗೆ ನಾವೇ ಹೋಗಿ ಬೆಂಬಲ ಕೊಡಲು ಸಾಧ್ಯವಿಲ್ಲ. ಈ ಎಲ್ಲಾ ಅಂಶ ಮುಂದಿಟ್ಟುಕೊಂಡು ನಾಳೆ ಬೆಂಬಲದ ತೀರ್ಮಾನ ಮಾಡುವೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಹೇಳುತ್ತೇನೆ ಎಂದರು.

ನಮಗೆ ಆರು ಕ್ಷೇತ್ರಗಳು ಪ್ರತಿಷ್ಠೆಯಾಗಿ ಪರಿಣಮಿಸಿವೆ. ಆರು ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲುವ ಸನ್ನಿವೇಶವಿದೆ. ಮೈಸೂರಿನಲ್ಲಿ ಮೊದಲ ಬಾರಿ ಕಾರ್ಯಾಗಾರದ ಅಂಶಗಳನ್ನು ಅಳವಡಿಕೆ ಮಾಡಲಾಗಿದೆ. ಹಿಂದೆ ಇಲ್ಲಿ ಎರಡು ಬಾರಿ ಜೆಡಿಎಸ್ ಅಭ್ಯರ್ಥಿ ಗೆದ್ದಿದ್ದಾರೆ. ಈ ಬಾರಿ ಕೂಡ ನಮ್ಮ ಅಭ್ಯರ್ಥಿ ಗೆಲ್ಲುವ ವಿಶ್ವಾಸ ನನಗಿದೆ. ವರುಣಾ ಕ್ಷೇತ್ರದಲ್ಲೂ ನಾಯಕರ ಕೊರತೆ ನಡುವೆಯೂ ಸಭೆ ಯಶಸ್ವಿಯಾಗಿದೆ. ಇದೆಲ್ಲವನ್ನು ಗಮನಿಸಿದರೆ ಜೆಡಿಎಸ್ ಮುಂದಿನ ಚುನಾವಣೆಯಲ್ಲೂ ಉತ್ತಮ ಫಲಿತಾಂಶ ಕಾಣಲಿದೆ ಎಂದು ಎಚ್ ಡಿಕೆ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ:ಮುಂದಿನ ಚುನಾವಣೆವರೆಗೂ ಬಸವರಾಜ ಬೊಮ್ಮಾಯಿಯವರೇ ಸಿಎಂ: ಸಚಿವ ಈಶ್ವರಪ್ಪ

ಚಾಮುಂಡೇಶ್ವರಿ ಕೈ ಟಿಕೆಟ್ ಜಿಟಿ ದೇವೇಗೌಡರಿಗೆ ಕೊಡಬೇಕಾಗುತ್ತದೆ ಎಂಬ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಯಾವ ಶಾಸಕರು ಏನೇ ಹೇಳಲಿ, ಯಾರು ಯಾವ ಪಕ್ಷಕ್ಕಾದರೂ ಹೋಗಲಿ. ಈಗಾಗಲೇ ನಾನು ಹೇಳಿರುವಂತೆ ಹೊಸ ನಾಯಕತ್ವಕ್ಕೆ ನಾನು ಬದ್ದ. ಕಾರ್ಯಕರ್ತರೇ ಹೊಸ ನಾಯಕತ್ವವನ್ನ ಹುಟ್ಟುಹಾಕಲಿದ್ದಾರೆ. ನಾವು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೊಸ ನಾಯಕರ ಹುಡುಕಾಟದಲ್ಲಿ ಇದ್ದೇವೆ. ಇದೇ ಅಂಶಕ್ಕೆ ನಾನು ಬದ್ದನಿದ್ದೇನೆ ಎಂದರು.

Advertisement

ನಮ್ಮ ಕಾರ್ಯಾಕರ್ತರು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹೊಸ ನಾಯಕರನ್ನು ಹಾಕುವಂತೆ ಕೇಳಿದ್ದಾರೆ. ನಾನು ಅದೇ ಕೆಲಸದಲ್ಲಿ ಇದ್ದೇನೆ. ಹಿಂದೆ ಇದ್ದವರಿಗೂ ರಾಜಕೀಯ ಉಳಿವು ಮುಖ್ಯ ಅಲ್ಲವೆ. ಅದಕ್ಕೆ ಅವರು ಅವರ ತಂಡ ಸಿದ್ದ ಮಾಡಿಕೊಳ್ಳುತ್ತಿದ್ದಾರೆ. ಅವರಂತೆ ಮೂರೂ ಪಕ್ಷಗಳಲ್ಲೂ ನಮ್ಮ ಪರ ಕೆಲಸ ಮಾಡುವವರು ಇದ್ದಾರೆ. ಕಾಂಗ್ರೆಸ್, ಬಿಜೆಪಿಯಲ್ಲೂ ನಮ್ಮ ಪರ ಇರುವವರು ಇದ್ದಾರೆ. ನಾಯಕರು ಏನೇ ಹೇಳಿದರೂ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಎರಡನೇ ಪ್ರಾಶಸ್ತ್ಯ ಮತ ಜೆಡಿಎಸ್‌ಗೆ ಕೊಡುತ್ತಾರೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಎರಡನೇ ಅಭ್ಯರ್ಥಿ ಗೆಲ್ಲಲು ಜೆಡಿಎಸ್ ಪಾತ್ರ ಬಹಳ ಮುಖ್ಯವಾಗಿದೆ‌ ಎಂದು ಕುಮಾರಸ್ವಾಮಿ ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next