ಚಿಕ್ಕಮಗಳೂರು: ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಎಚ್ ಡಿ ತಮ್ಮಯ್ಯ ಅವರ ವಿರುದ್ಧ 7,500 ಮತಗಳ ಅಂತರದಲ್ಲಿ ಪರಾಜಯಗೊಂಡಿದ್ದಾರೆ.
ಇದನ್ನೂ ಓದಿ:ಪ್ರೀತಂ ಆಘಾತಕಾರಿ ಸೋಲಿನ ನಡುವೆಯೂ ಹಾಸನದಲ್ಲಿ ಅರಳಿದ ಕಮಲ
ಒಕ್ಕಲಿಗ ಸಮುದಾಯದ ಪ್ರಭಾವಿ ಮುಖಂಡರಾಗಿರುವ ಸಿ.ಟಿ.ರವಿ ಸೋಲು ಬಿಜೆಪಿಗೆ ದೊಡ್ಡ ಹಿನ್ನಡೆಯಾದಂತಾಗಿದೆ. ಸೋಲಿನ ಕುರಿತು ಟ್ವೀಟ್ ಮಾಡಿರುವ ಸಿ.ಟಿ.ರವಿ, ಜನರ ತೀರ್ಪನ್ನು ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ.
“ವಿಧಾನಸಭೆ ಚುನಾವಣೆಯಲ್ಲಿನ ಸೋಲನ್ನು ನಾನು ಸ್ವೀಕರಿಸಿದ್ದೇನೆ. ಇಷ್ಟು ವರ್ಷಗಳ ಕಾಲ ನನ್ನನ್ನು ಬೆಂಬಲಿಸಿದ ಚಿಕ್ಕಮಗಳೂರು ಕ್ಷೇತ್ರದ ಜನರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ತುಂಬು ಹೃದಯದ ಅಭಿನಂದನೆಗಳು. ಗೆಲುವು ಸಾಧಿಸಿದ ಎಲ್ಲಾ ಅಭ್ಯರ್ಥಿಗಳಿಗೂ ಅಭಿನಂದನೆಗಳು. ಮುಂಬರು ದಿನಗಳಲ್ಲಿ ಎಲ್ಲರಿಗೂ ಒಳ್ಳೆಯದಾಗಲಿ” ಎಂದು ಟ್ವೀಟ್ ನಲ್ಲಿ ಸಿ.ಟಿ.ರವಿ ತಿಳಿಸಿದ್ದಾರೆ.