Advertisement
ಭೀಮಾನದಿ ತೀರದ ಪುಷ್ಕರ ಉತ್ಸವ ಸ್ಥಳದಲ್ಲಿ ಗುರುವಾರ ಜಿಲ್ಲಾ ಪಂಚಾಯತ್ ವತಿಯಿಂದ ಸ್ವತ್ಛ ಭಾರತ ಮಿಷನ್ ಯೋಜನೆಯಡಿ ಏರ್ಪಡಿಸಿದ್ದ ವಿಶ್ವ ಕೈ ತೊಳೆಯುವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
Advertisement
ಸ್ವತ್ಛ ಭಾರತ ಮಿಷನ್ ಜಿಲ್ಲಾ ವ್ಯವಸ್ಥಾಪಕ ಪ್ರಶಾಂತ ಪ್ರಾಸ್ತಾವಿಕವಾಗಿ ಮಾತನಾಡಿ, ಸರಿಯಾಗಿ ಕೈ ತೊಳೆಯದೆ ಇರುವುದರಿಂದ ಆಹಾರ ಸೇವನೆಯ ಸಂದರ್ಭದಲ್ಲಿ ಕೀಟಾಣುಗಳು ದೇಹ ಸೇರುತ್ತವೆ. ಇದರಿಂದ ಅತಿಸಾರ, ಭೇದಿ, ಅಪೌಷ್ಟಿಕತೆ ಉಂಟಾಗುತ್ತದೆ. ಈ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಲು 2008 ರಿಂದ ಪ್ರತಿವರ್ಷ ಅಕ್ಟೋಬರ್ 15ರಂದು ವಿಶ್ವ ಕೈ ತೊಳೆಯುವ ದಿನ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಪಂ ಅಧ್ಯಕ್ಷ ಬಸರೆಡ್ಡಿಗೌಡ ಮಾಲಿಪಾಟೀಲ ಅನಪುರ ಕೈ ತೊಳೆದುಕೊಳ್ಳುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕಲಿಕಾ ಸಂಸ್ಥೆಯ ಧನಲಕ್ಷ್ಮೀ ಮತ್ತು ರೇಖಾ ಅವರು ಸಮಾರಂಭದಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ಕೈ ತೊಳೆಯುವ ವಿಧಾನ ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಚಂದ್ರಕಲಾ ಶರಣಗೌಡ ಹೊಸಮನಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಸಂತರಾವ್ ವಿ. ಕುಲಕರ್ಣಿ, ಭೀಮಾ ಪುಷ್ಕರ ಸೇವಾ ಸಮಿತಿ ಅಧ್ಯಕ್ಷ ಲೀಲಾಕೃಷ್ಣ ಹಾಗೂ ಜಿಪಂ ಸದಸ್ಯರು ಇದ್ದರು.
ಕಾರ್ಯಕ್ರಮದಲ್ಲಿ ಸ್ವತ್ಛ ಭಾರತ ಮಿಷನ್ ಸಮಾಲೋಚಕ ವೆಂಕಟೇಶ ಪವಾರ್, ಮಹೇಶಕುಮಾರ, ಮಹಾದೇವರೆಡ್ಡಿ, ಶಿವಕುಮಾರ, ನಾರಾಯಣ ಸೇರಿದಂತೆ ಅಭಿವೃದ್ಧಿ ಅಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಶಿಕ್ಷಕರು ಪಾಲ್ಗೊಂಡಿದ್ದರು. ಆರ್.ವಿ. ಶಾಲೆ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಅಮರಯ್ಯ ಸ್ವಾಮಿ ಜಾಲಿಬೆಂಚಿ ನಿರೂಪಿಸಿದರು.
ಸಮಾರಂಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಬಾಲ್ಯ ವಿವಾಹ ತಡೆಗಟ್ಟುವಿಕೆ, ಬಾಲ ಕಾರ್ಮಿಕ ಪದ್ಧತಿ ನಿಷೇಧ, ಸ್ವತ್ಛ ಭಾರತ ಅಭಿಯಾನ, ಮಕ್ಕಳ ಸಹಾಯವಾಣಿ-1098 ಕುರಿತ ಕರಪತ್ರ ವಿತರಿಸಲಾಯಿತು.
ಸರ್ಕಾರಿ ಕಚೇರಿ ಮತ್ತು ಶಾಲಾ ಕಾಲೇಜುಗಳ ಶೌಚಾಲಯದಲ್ಲಿ ಕೈ ತೊಳೆಯಲು ಸಾಬೂನು ವ್ಯವಸ್ಥೆ ಮಾಡಬೇಕು. ಶುಚಿತ್ವ ಜಾಗೃತಿ ಕಾರ್ಯಕ್ರಮ ಕೇವಲ ಹೆಸರಿಗಾಗಿ ಆಯೋಜಿಸಿದಂತೆ ಆಗಬಾರದು, ಜಿಲ್ಲಾದ್ಯಂತ ಬದಲಾವಣೆಗೆ ನಾಂದಿಯಾಗಬೇಕು.ಕಿಶನ ರಾಠೊಡ, ಜಿಪಂ ಸದಸ