Advertisement

‘ಓದುವ ಹವ್ಯಾಸದಿಂದ ವ್ಯಕ್ತಿತ್ವ ವಿಕಸನ’

12:52 PM Aug 12, 2018 | Team Udayavani |

ಮಹಾನಗರ: ಓದುವ ಹವ್ಯಾಸದಿಂದ ನಮ್ಮ ವ್ಯಕ್ತಿತ್ವವು ವಿಕಸನಗೊಳಿಸುತ್ತದೆ. ಪತ್ರಿಕೆಗಳನ್ನು ಹಾಗೂ ಪುಸ್ತಕಗಳನ್ನು ಓದುವುದರಿಂದ ಜ್ಞಾನವನ್ನು ಹೆಚ್ಚಿಸಿಕೊಳ್ಳಬಹುದು ಎಂದು ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್‌ ಚಂದ್ರಹಾಸ ರೈ ಬಿ. ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಮಂಗಳೂರು ರಾಮಕೃಷ್ಣ ವಿದ್ಯಾಸಂಸ್ಥೆಗಳು ಹಾಗೂ ಕರಾವಳಿ ವಿಕಿಪೀಡಿಯನ್ಸ್‌ ಸಹಯೋಗದೊಂದಿಗೆ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ| ಎಸ್‌. ಆರ್‌. ರಂಗನಾಥನ್‌ ಸ್ಮರಣಾರ್ಥ ಗ್ರಂಥ ಪಾಲಕರ ದಿನಾಚರಣೆ ಅಂಗವಾಗಿ ನಗರದ ಬಂಟ್ಸ್‌ ಹಾಸ್ಟೆಲ್‌ ಶ್ರೀ ರಾಮಕೃಷ್ಣ ವಿದ್ಯಾ ಸಂಸ್ಥೆಯ ಸಭಾಭವನದಲ್ಲಿ ಶನಿವಾರ ನಡೆದ ವಿಶ್ವವಿದ್ಯಾಲಯ ಮಟ್ಟದ ವಿಚಾರ ಕೂಟ, ಪುಸ್ತಕ ಪ್ರದರ್ಶನ ಹಾಗೂ ಮಾರಾಟ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿದರು.

Advertisement

ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡರೆ ಜೀವನದ ತಿರುವುಗಳಲ್ಲಿ ಎದುರಾಗುವ ನಾನಾ ಸವಾಲುಗಳನ್ನು ಆತ್ಮ ವಿಶ್ವಾಸದಿಂದ ಎದುರಿಸುವ ಸಾಮರ್ಥ್ಯ ಬೆಳೆಯುತ್ತದೆ ಎಂದರು. ಶ್ರೀರಾಮಕೃಷ್ಣ ವಿದ್ಯಾಸಂಸ್ಥೆಯ ಸಂಚಾಲಕ ಕೃಷ್ಣ ಪ್ರಸಾದ್‌ ರೈ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರಾವಳಿ ವಿಕಿಪೀ ಡಿಯನ್ಸ್‌ ಕಾರ್ಯದರ್ಶಿ ಡಾ| ಯು.ಬಿ. ಪವನಜ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಪ್ರಾಧ್ಯಾಪಕಿ ಡಾ| ರೇಖಾ ಡಿ. ಪೈ ಅವರು ಉಪನ್ಯಾಸ ನೀಡಿದರು. ಉಪನ್ಯಾಸಕಿ ಸೌಮ್ಯಾಶ್ರೀ ಅವರು ಪ್ರಾಸ್ತಾವಿಸಿದರು. ಕಾಲೇಜ್‌ನ ಪ್ರಾಂಶುಪಾಲ ಡಾ| ಕಿಶೋರ್‌ ಕುಮಾರ್‌ ರೈ ಶೇಣಿ ಅವರು ಸ್ವಾಗತಿಸಿದರು. ಕವಿತಾ ಗಣೇಶ್‌ ಅವರು ವಂದಿಸಿದರು. ಪೃಥ್ವಿ ಜೆ.ಎನ್‌. ಕಾರ್ಯಕ್ರಮ ನಿರೂಪಿಸಿದರು.

ಉದ್ಘಾಟನೆ
ಇದೇ ಸಂದರ್ಭ ಕಾಲೇಜಿನ ಗ್ರಂಥಾಲಯ ಹಾಗೂ ಪುಸ್ತಕ ಮಾರಾಟ ಮಳಿಗೆಯನ್ನು ಉದ್ಘಾಟಿಸಲಾಯಿತು. ಈ ಪುಸ್ತಕ ಪ್ರದರ್ಶನ ಹಾಗೂ ಮಾರಾಟ ಐದು ದಿನಗಳ ಕಾಲ ನಡೆಯಲಿದೆ. ಮಂಗಳೂರು ವಿವಿ ಮಟ್ಟದ ವಿಚಾರ ಕೂಟ, ಪುಸ್ತಕ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next