Advertisement
1917ರಲ್ಲಿ ಸ್ಥಾಪನೆಅತ್ಯಂತ ಗ್ರಾಮೀಣ ಭಾಗವಾಗಿರುವ ವಿಟ್ಲ-ಮಾಣಿಲ ರಸ್ತೆಯ ಪೆರುವಾಯಿ ಕೊಲ್ಲತ್ತಡ್ಕದಲ್ಲಿ 1917ರಲ್ಲಿ ಈ ಶಾಲೆ ಸ್ಥಾಪನೆಗೊಂಡಿದೆ. ಆರಂಭದಲ್ಲಿ 1ರಿಂದ 5ನೇ ತರಗತಿವರೆಗೆ ಇದ್ದರೆ, ಬಳಿಕ 7ನೇ ತರಗತಿ ವರೆಗೆ ವಿಸ್ತರಿಸಲಾಯಿತು. ಪ್ರಸ್ತುತ ನಾಲ್ವರು ಶಿಕ್ಷಕರು ಹಾಗೂ 124 ವಿದ್ಯಾರ್ಥಿಗಳಿದ್ದಾರೆ. ಪೆರುವಾಯಿ ಗ್ರಾಮದ 10 ಸಾವಿರಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ಇಲ್ಲಿಯೇ ವಿದ್ಯಾರ್ಜನೆ ಮಾಡಿ ಇಂದು ಅಮೆರಿಕ, ಶಾರ್ಜಾ, ಸೌದಿ ಅರೇಬಿಯಾ ಮೊದಲಾದ ಕಡೆಗಳಲ್ಲಿ ಉದ್ಯೋಗದಲ್ಲಿದ್ದಾರೆ. ಇದೊಂದು ಗ್ರಾಮೀಣ ಭಾಗವಾಗಿದ್ದು, ಕೆಲವೇ ಕಿ.ಮೀ. ಅಂತರದಲ್ಲಿ ಕೇರಳವನ್ನು ಸಂಪರ್ಕಿಸಲಾಗುತ್ತದೆ.
ನೀರು ಉಳಿಸುವ ಉದ್ದೇಶದಿಂದ ಶಾಲೆಯ ಸಮೀಪವೇ ಇಂಗುಗುಂಡಿ ನಿರ್ಮಿಸಲಾಗಿದ್ದು, ಇದರಿಂದಲೇ ಶಾಲೆಗೆ ನೀರು ಸರಬರಾಜು ನಡೆಯುತ್ತಿದೆ. ಮೂರು ಎಕರೆ ಜಾಗದಲ್ಲಿ ಮೈದಾನ, ಶಾಲೆಯ ಸುತ್ತಲೂ ತೊಂಡೆಕಾಯಿ, ಬಸಳೆ, ತೆಂಗಿನ ಮರಗಳನ್ನು ಬೆಳೆ ಸಲಾಗುತ್ತಿದೆ. ತರಕಾರಿಯನ್ನು ಮಧ್ಯಾಹ್ನದ ಬಿಸಿಯೂಟಕ್ಕೆ ಉಪ ಯೋಗಿಸಲಾಗುತ್ತಿದೆ. ಪ್ರತಿ ವರ್ಷವೂ ಶಾಲೆಯಲ್ಲಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ತುಳುನಾಡಿನ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಆಟಿದ ಕೂಟ, ಕೆಸರ್ಡೊಜಿ ದಿನ ಕಾರ್ಯಕ್ರಮ ನಡೆಸಲಾಗುತ್ತಿದೆ. ಅದಲ್ಲದೆ ವಿದ್ಯಾರ್ಥಿಗಳಿಗೆ ನೃತ್ಯ ತರಬೇತಿ ಕೂಡ ನೀಡಲಾಗುತ್ತಿದೆ. ಅಭಿವೃದ್ಧಿ ಕಾಮಗಾರಿ ನಡೆದಿಲ್ಲ
ಇಲ್ಲಿ ಅಕ್ಷರ ದಾಸೋಹ ಹಾಗೂ ಶೌಚಾಲಯ ಕಟ್ಟಡ ಹೊರತುಪಡಿಸಿ ಬೇರೆ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆದಿಲ್ಲ. ಪುರಾತನ ಕಟ್ಟಡ, ಹೆಂಚಿನ ಮಾಡು ಇಂದಿಗೂ ಇದೆ. ಮತ್ತೂಂದು ಕೊಠಡಿಯಲ್ಲಿ ಕಂಪ್ಯೂಟರ್ ತರಬೇತಿ, ಕನ್ನಡದ ಜತೆಗೆ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲಾಗುತ್ತಿದೆ. ಕಳೆದ ಬಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಇಲ್ಲಿನ ಮುಖ್ಯ ಶಿಕ್ಷಕ ಕುಂಞಿ ನಾಯ್ಕ ಹಾಗೂ ಶಾಲೆಯ ಸಂಚಾಲಕರಾಗಿ ಸಚಿನ್ ಅಡ್ವಾಯಿ ಮತ್ತು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಂದ್ರ ರೈ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಕಂಪ್ಯೂಟರ್ ಶಿಕ್ಷಕಿ ಸಹಿತ ಗೌರವ
ಶಿಕ್ಷಕರಿಗೆ ಇಲ್ಲಿಯ ಖಾಯಂ ಶಿಕ್ಷಕರು ವೇತನ ನೀಡುತ್ತಿದ್ದಾರೆ.
Related Articles
ಶಾಲೆಯ ಹಲವು ಮೂಲ ಸೌಲಭ್ಯ ಪೂರೈಸುವುದರೊಂದಿಗೆ ಅರ್ಥಪೂರ್ಣವಾಗಿ ಶತಮಾನೋತ್ಸವ ಸಂಭ್ರಮ ಆಚರಿಸಲು ಸಮಿತಿ ತೀರ್ಮಾನಿಸಿದೆ. ರಂಗಮಂದಿರ, ಆಫೀಸ್ ಕೊಠಡಿ, ಗ್ರೀನ್ ರೂಂ, ವಾಚನಾಲಯ, ಪ್ರಯೋಗಾಲಯ, ತರಗತಿ ಕೋಣೆಗಳಿಗೆ ಟೈಲ್ಸ್, ಶೌಚಾಲಯ ನಿರ್ಮಾಣ, ಕಂಪ್ಯೂಟರ್ ಕೊಠಡಿ, ಶುದ್ಧ ಕುಡಿಯುವ ನೀರಿನ ಘಟಕ, ಎಲ್.ಕೆ.ಜಿ. ಹಾಗೂ ಯು.ಕೆ.ಜಿ. ತರಗತಿ ಆರಂಭ, ಗೌರವ ಶಿಕ್ಷಕರಿಗೆ ಗೌರವಧನ ನೀಡುವ ಮೊದಲಾದ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಶತಮಾನೋತ್ಸವವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ.
ಕುಂಞ ನಾಯ್ಕ,
ಶಾಲಾ ಮುಖ್ಯ ಶಿಕ್ಷಕ
Advertisement
ಉದಯಶಂಕರ್ ನೀರ್ಪಾಜೆ