Advertisement

ಪ್ರಚೋದನಾಕಾರಿ ಭಾಷಣ, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ಅರ್ಜಿ ವಜಾ

08:55 AM Aug 01, 2019 | Nagendra Trasi |

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಹಾಗೂ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ.

Advertisement

ಪ್ರಕರಣ ಸಂಬಂಧ ಚುನಾವಣಾಧಿಕಾರಿ ನೀಡಿದ ದೂರು, ಕೋಣಾಜೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್.ಐ.ಆರ್ ಹಾಗೂ ಬಂಟ್ವಾಳ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಗೊಳಿಸುವಂತೆ ಕೋರಿ ಕಲ್ಲಡ್ಕ ಪ್ರಭಾಕರ್ ಭಟ್ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾ. ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಪ್ರಕರಣ ರದ್ದುಗೊಳಿಸಿ ಆದೇಶಿಸಿತು.

2018 ಏ.6ರಂದು ಪುಣ್ಯಕೋಟಿ ನಗರ ಕೈರಂಗಳಕ್ಕೆ ಭೇಟಿ ಭೇಟಿ ನೀಡಿದ್ದ ವೇಳೆ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಚುನಾವಣಾಧಿಕಾರಿ ಟಿ. ಯೋಗೀಶ್ ಏ.8ರಂದು ಕೋಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಬಂಟ್ವಾಳ ನ್ಯಾಯಾಲಯಕ್ಕೆ ಚಾಜ್೯ಶೀಟ್ ಸಲ್ಲಿಸಿದ್ದರು. ಇದನ್ನು ರದ್ದುಗೊಳಿಸುವಂತೆ ಕೋರಿ ಪ್ರಭಾಕರ್ ಭಟ್ಟರು ಹೈಕೋಟ್೯ಗೆ ಅರ್ಜಿ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next