Advertisement

ಶರ್ಮಿಳಾ ಮಾಂಡ್ರೆ ವಿರುದ್ಧ ಅರ್ಜಿ

12:34 AM Apr 07, 2020 | Sriram |

ಬೆಂಗಳೂರು: ಲಾಕ್‌ಡೌನ್‌ ಆದೇಶ ಉಲ್ಲಂಘಿಸಿ ಮಧ್ಯರಾತ್ರಿ ಜಾಲಿ ರೈಡ್‌ ನಡೆಸಿರುವ ನಟಿ ಶರ್ಮಿಳಾ ಮಾಂಡ್ರೆ ಮತ್ತು ಪೊಲೀಸ್‌ ಪಾಸ್‌ಗಳನ್ನು ದುರ್ಬಳಕೆ ಮಾಡುತ್ತಿರುವವರ ವಿರುದ್ಧ ವಿಪತ್ತು ನಿರ್ವಹಣ ಕಾಯ್ದೆ-2005ರಡಿ ಪ್ರಕರಣ ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ನಿರ್ದೇಶ ನೀಡಬೇಕು ಎಂದು ಕೋರಿ ವಕೀಲೆ ಗೀತಾ ಮಿಶ್ರಾ ಹೈಕೋರ್ಟ್‌ಗೆ ಮಧ್ಯಾಂತರ ಅರ್ಜಿ ಸಲ್ಲಿಸಿದ್ದಾರೆ.

Advertisement

ಶನಿವಾರ ಮಧ್ಯರಾತ್ರಿ 3 ಗಂಟೆಗೆ ವಸಂತನಗರದ ಪ್ಯಾಲೇಸ್‌ ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರು ಅಪಘಾತಕ್ಕೀಡಾಯಿತು. ಅದರಲ್ಲಿದ್ದ ನಟಿ ಶರ್ಮಿಳಾ ಮಾಂಡ್ರೆ, ಇನ್ನೊಬ್ಬ ಪ್ರಭಾವಿ ವ್ಯಕ್ತಿ ಲೋಕೇಶ್‌ ಎಂಬವರು ಗಾಯಗೊಂಡಿದ್ದರು. ಪೊಲೀಸರು ಒದಗಿಸಿದ್ದ ಕೋವಿಡ್‌-19 ಪಾಸ್‌ನ್ನು ಕಾರಿಗೆ ಅಂಟಿಸಲಾಗಿತ್ತು. ನಿಗದಿತ ಉದ್ದೇಶಕ್ಕೆ ನೀಡಿದ ಪಾಸ್‌ಗಳು ವ್ಯಾಪಕವಾಗಿ ದುರ್ಬಳಕೆ ಆಗುತ್ತಿರುವುದಕ್ಕೆ ಇದು ಸಾಕ್ಷಿ. ಅದ್ದರಿಂದ ಪಾಸ್‌ಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರ ವಿರುದ್ಧ ಪೋಲಿಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಕಠಿನ ಕ್ರಮ ಜರಗಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಪೊಲೀಸರ ಬಿಗಿ ಕ್ರಮಗಳ ಹೊರತಾಗಿಯೂ ಅನೇಕ ಸಾರ್ವಜನಿಕರು ಲಾಕ್‌ಡೌನ್‌ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿಲ್ಲ. ವಾಹನ ಸವಾರರು ಮುಕ್ತವಾಗಿ ಓಡಾಡುತ್ತಿದ್ದಾರೆ. ಇಂಥ ಪ್ರಕರಣಗಳಲ್ಲಿ ವಿಪತ್ತು ನಿರ್ವಹಣ ಕಾಯ್ದೆ-2005ರ ಅನ್ವಯ ಕ್ರಮ ಕೈಗೊಳ್ಳಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next