Advertisement

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

11:27 AM Nov 21, 2024 | Team Udayavani |

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರ ದಿಂದ ಗೆದ್ದಿರುವ ಶೋಭಾ ಕರಂದ್ಲಾಜೆ ಅವರ ಆಯ್ಕೆಯನ್ನು ರದ್ದು ಪಡಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಡಿಸೆಂಬರ್‌ 6ಕ್ಕೆ ಮುಂದೂಡಿದೆ.

Advertisement

ಈ ವಿಚಾರವಾಗಿ ನಂದಿನಿಲೇಔಟ್‌ ನಿವಾಸಿ ಬಿ. ಮೋಹನ್‌ ಕುಮಾರ್‌ ಅವರು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯು ಏಕಸದಸ್ಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು. ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಲಿಖೀತ ಆಕ್ಷೇಪಣೆಗಳನ್ನು ಮುಂದಿನ ವಿಚಾರಣೆ ವೇಳೆಗೆ ಸಲ್ಲಿಸುವಂತೆ ಶೋಭಾ ಪರ ವಕೀಲ ವೆಂಕಟೇಶ್‌ ಪಿ. ದಳವಾಯಿ ಅವರಿಗೆ ಸೂಚಿಸಿ ವಿಚಾರಣೆಯನ್ನು ಡಿಸೆಂಬರ್‌ 6ಕ್ಕೆ ಮುಂದೂಡಿತು. ಲೋಕಸಭೆ ಚುನಾವಣೆ ವೇಳೆ ಶೋಭಾ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಅಪೂರ್ಣ ಮಾಹಿತಿ ಕೊಟ್ಟಿದ್ದಾರೆ. ತಮ್ಮ ವಿರುದ್ಧದ ಕ್ರಿಮಿನಲ್‌ ಪ್ರಕರಣ ಬಗ್ಗೆ ಮಾಹಿತಿಯನ್ನು ಮರೆ ಮಾಚಿದ್ದಾರೆ. ಹೀಗಾಗಿ ಅವರ ಸದಸ್ಯತ್ವ ರದ್ದು ಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next