Advertisement
ಈ ವಿಚಾರವಾಗಿ ನಂದಿನಿಲೇಔಟ್ ನಿವಾಸಿ ಬಿ. ಮೋಹನ್ ಕುಮಾರ್ ಅವರು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯು ಏಕಸದಸ್ಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು. ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಲಿಖೀತ ಆಕ್ಷೇಪಣೆಗಳನ್ನು ಮುಂದಿನ ವಿಚಾರಣೆ ವೇಳೆಗೆ ಸಲ್ಲಿಸುವಂತೆ ಶೋಭಾ ಪರ ವಕೀಲ ವೆಂಕಟೇಶ್ ಪಿ. ದಳವಾಯಿ ಅವರಿಗೆ ಸೂಚಿಸಿ ವಿಚಾರಣೆಯನ್ನು ಡಿಸೆಂಬರ್ 6ಕ್ಕೆ ಮುಂದೂಡಿತು. ಲೋಕಸಭೆ ಚುನಾವಣೆ ವೇಳೆ ಶೋಭಾ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಅಪೂರ್ಣ ಮಾಹಿತಿ ಕೊಟ್ಟಿದ್ದಾರೆ. ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣ ಬಗ್ಗೆ ಮಾಹಿತಿಯನ್ನು ಮರೆ ಮಾಚಿದ್ದಾರೆ. ಹೀಗಾಗಿ ಅವರ ಸದಸ್ಯತ್ವ ರದ್ದು ಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. Advertisement
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
11:27 AM Nov 21, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.