Advertisement

HC: 9 ಸಚಿವರು, 37 ಶಾಸಕರ ಪ್ರಮಾಣವಚನ ಅಸಿಂಧು ಕೋರಿದ್ದ ಅರ್ಜಿ ತಿರಸ್ಕಾರ

11:26 PM Dec 15, 2023 | Team Udayavani |

ಬೆಂಗಳೂರು: ನಿಗದಿತ ನಮೂನೆಯಲ್ಲಿ ಪ್ರಮಾಣ ವಚನ ಸ್ವೀಕರಿಸದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಜಮೀರ್‌ ಅಹ್ಮದ್‌ ಮತ್ತು ಕೆ.ಎನ್‌.ರಾಜಣ್ಣ ಸಹಿತ 9 ಸಚಿವರು ಹಾಗೂ 37 ಶಾಸಕರ ಪ್ರಮಾಣ ವಚನ ಸ್ವೀಕಾರವನ್ನು ಅಸಾಂವಿಧಾನಿಕವೆಂದು ಘೋಷಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ.

Advertisement

ಬೆಳಗಾವಿ ಜಿಲ್ಲೆಯ ಭೀಮಪ್ಪ ಗಡಾದ ಸಲ್ಲಿಸಿದ್ದ ಪಿಐಎಲ್‌ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾ| ಪಿ.ಬಿ. ವರಾಳೆ ಮತ್ತು ನ್ಯಾ| ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ಇದು ಪ್ರಜಾಸತ್ತಾತ್ಮಕ ವ್ಯವಸ್ಥೆ. ಸಚಿವರು ಹಾಗೂ ಶಾಸಕರು ಮತದಾರರಿಂದ ಚುನಾಯಿತರಾಗಿದ್ದಾರೆ. ನಿಗದಿತ ನಮೂನೆ ಹೊರತಾಗಿ ಇತರ ಮಾದರಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿರುವುದು ತಾಂತ್ರಿಕ ಅಂಶವಷ್ಟೇ. ಕೆಲವೊಮ್ಮೆ ಉತ್ಸಾಹದಲ್ಲಿ ಯಾರನ್ನಾದರೂ ಹೆಸರಿಸಬಹುದು. ಅವರು ತಮ್ಮ ಕೆಲಸ ಕಾರ್ಯಗಳನ್ನು ಮಾಡಲಿ. ನಿಮಗೆ ಅಷ್ಟೊಂದು ಅತೃಪ್ತಿಯಿದ್ದರೆ ಮುಂಬರುವ ಚುನಾವಣೆಯಲ್ಲಿ ಅವರು ನಿಮ್ಮ ಪ್ರತಿನಿಧಿಗಳಲ್ಲ ಎಂಬುದನ್ನು ತೋರಿಸಿ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

Advertisement

Udayavani is now on Telegram. Click here to join our channel and stay updated with the latest news.

Next