Advertisement

Soujanya Case ಮರು ತನಿಖೆ ಕೋರಿದ ಅರ್ಜಿ: ಸರ್ಕಾರ, ಸಿಬಿಐಗೆ ನೋಟಿಸ್‌

10:48 PM Feb 20, 2024 | Team Udayavani |

ಬೆಂಗಳೂರು: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸಲು ಆದೇಶಿಸುವಂತೆ ಕೋರಿದ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಮತ್ತು ಸಿಬಿಐಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

Advertisement

ಈ ಕುರಿತಂತೆ ಚಂದಪ್ಪ ಗೌಡ ಸಲ್ಲಿಸಿದ್ದ ತಕರಾರು ಅರ್ಜಿಯು ನ್ಯಾ| ಕೆ.ನಟರಾಜನ್‌ ಅವರ ನ್ಯಾಯಪೀಠದ ಮುಂದೆ ಇತ್ತೀಚೆಗೆ ವಿಚಾರಣೆಗೆ ಬಂದಿತ್ತು.

ಸ್ವಲ್ಪ ಹೊತ್ತು ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವಗಳ ವಿಭಾಗದ ಎಡಿಜಿಪಿ, ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್‌ ವರಿಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್‌ ಠಾಣಾಧಿಕಾರಿ ಮತ್ತು ಸಿಬಿಐಗೆ ನೋಟಿಸ್‌ ಜಾರಿಗೊಳಿಸಿತು.

ಅಲ್ಲದೆ, ಪ್ರಕರಣದಿಂದ ಸಂತೋಷ್‌ ರಾವ್‌ ಅನ್ನು ಖುಲಾಸೆಗೊಳಿಸಿ ವಿಚಾರಣ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್‌ ಮೇಲ್ಮನವಿ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಮೇಲ್ಮನವಿಯೊಂದಿಗೆ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಅರ್ಜಿದಾರರು ಪರ ವಕೀಲರು ಮನವಿ ಮಾಡಿದರು.ಅದನ್ನು ಪರಿಗಣಿಸಿರುವ ನ್ಯಾಯಪೀಠ, ಸೂಕ್ತ ವಿಭಾಗೀಯ ನ್ಯಾಯಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ಸೂಚಿಸಿತು. ಖುಲಾಸೆಯಾಗಿರುವ ಸಂತೋಷ್‌ ರಾವ್‌ ಅನ್ನೂ ಪ್ರತಿವಾದಿ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next