Advertisement

ತ್ರಿವಳಿ ತಲಾಖ್‌ ಕಾಯ್ದೆ ವಿರುದ್ಧ ಹೈಕೋರ್ಟ್‌ಗೆ ಅರ್ಜಿ

10:43 AM Aug 06, 2019 | Team Udayavani |

ಬೆಂಗಳೂರು: ತ್ರಿವಳಿ ತಲಾಖ್‌ ಪದ್ದತಿ ನಿಷೇಧಿಸಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಮುಸ್ಲಿಂ ಮಹಿಳೆಯರ (ಮದುವೆ ಮೇಲಿನ ಹಕ್ಕಿನ ರಕ್ಷಣೆ) ಕಾಯ್ದೆ-2019’ರ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಬೆಂಗಳೂರು ಮೂಲದ ಸಾಮಾಜಿಕ ಕಾರ್ಯಕರ್ತ ಮಹಮ್ಮದ್ ಆರೀಫ್ ಜಮೀಲ್ ಈ ಸಂಬಂಧ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ವಕೀಲ ರಹ್ಮತ್‌ಉಲ್ಲಾ ಕೊತ್ವಾಲ್ ಅರ್ಜಿದಾರರ ಪರ ವಕಾಲತ್ತು ಹಾಕಿದ್ದಾರೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾಯ್ದೆಯು ಸಂವಿಧಾನದ ಪರಿಚ್ಛೇದ 14, 15, 21 ಹಾಗೂ 25ರ ಸ್ಪಷ್ಟ ಉಲ್ಲಂಘನೆಯಾಗಿದೆ. ಆದ್ದರಿಂದ ಈ ಕಾಯ್ದೆಯನ್ನು ಸಂವಿಧಾನ ಬಾಹಿರ ಎಂದು ಘೋಷಿಸಬೇಕು. ಅದೇ ರೀತಿ ‘ಮುಸ್ಲಿಂ ಮಹಿಳೆಯರ (ಮದುವೆ ಮೇಲಿನ ಹಕ್ಕಿನ ರಕ್ಷಣೆ) ಕಾಯ್ದೆ-2019’ರ ಅನುಷ್ಠಾನಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next