Advertisement

ಮುರುಘಾ ಮಠ: ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

08:39 PM Dec 15, 2022 | Team Udayavani |

ಬೆಂಗಳೂರು: ಪೋಕ್ಸೋ ಕಾಯ್ದೆಯಡಿ ಮರುಘಾ ಶರಣರು ನ್ಯಾಯಾಂಗ ಬಂಧನದಲ್ಲಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗದ ಜಗದ್ಗುರು ಮುರುಘಾ ರಾಜೇಂದ್ರ ಬೃಹನ್ಮಠಕ್ಕೆ  ಆಡಳಿತಾಧಿಕಾರಿ ನೇಮಿಸಿರುವ ವಿಚಾರ ಇದೀಗ ಹೈಕೋರ್ಟ್‌ ಮೆಟ್ಟಿಲೇರಿದೆ.

Advertisement

ಮಠಕ್ಕೆ ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್‌. ವಸ್ತ್ರದ್‌ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮ ಮಾಡಿ ರಾಜ್ಯ ಸರ್ಕಾರ ಡಿ.13ರಂದು ಹೊರಡಿಸಿರುವ ಆದೇಶ ಪ್ರಶ್ನಿಸಿ ಚಿತ್ರದುರ್ಗದ ಡಿ.ಎಸ್‌. ಮಲ್ಲಿಕಾರ್ಜುನ ಹಾಗೂ ಇತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆಯ ಕಾರ್ಯದರ್ಶಿ, ಮುಜರಾಯಿ ಇಲಾಖೆಯ ಉಪ ಕಾರ್ಯದರ್ಶಿ, ಮುಜರಾಯಿ ಆಯುಕ್ತರು, ಚಿತ್ರದುರ್ಗ ಜಿಲ್ಲಾಧಿಕಾರಿ, ಮಠದ ಆಡಳಿತಾಧಿಕಾರಿ ಪಿ.ಎಸ್‌.ವಸ್ತ್ರದ್‌, ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ ಮತ್ತು ಪೊಕೊÕ ಪ್ರಕರಣದ ಆರೋಪಿ  ಶಿವಮೂರ್ತಿ ಶರಣರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ತಮ್ಮ ವಿರುದ್ಧ ಪ್ರಕರಣ ದಾಖಲಾದ ನಂತರ ಈಗಾಗಲೇ ಮುರುಘಾ ಶರಣರು ಮಠದ ವ್ಯವಹಾರಗಳಿಗೆ ಸಂಬಂಧಿಸಿದ ಜಿಪಿಎ ನೀಡಿದ್ದಾರೆ. ಶಿಕ್ಷಣ ಸಂಸ್ಥೆಗಳಿಗೆ ನಿವೃತ್ತ ನ್ಯಾಯಾಧೀಶರಿಗೆ ಜಿಪಿಎ ನೀಡಿದ್ದಾರೆ. ಮಠದ ವ್ಯವಹಾರಗಳಿಗೆ ಬಸವಪ್ರಭು ಸ್ವಾಮಿಗೆ ಜಿಪಿಎ ನೀಡಲಾಗಿದೆ. ಮಠಾಧಿಪತಿ ಜೈಲಿನಲ್ಲಿರುವುದು ಆಡಳಿತಾಧಿಕಾರಿ ನೇಮಿಸಲು ಸಕಾರಣವಲ್ಲ. ಹಾಗಾಗಿ ಆಡಳಿತಾಧಿಕಾರಿ ನೇಮಕ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next