ಚಿಕ್ಕಮಗಳೂರು : ದೇಶದಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಪಾಲಿಟೆಕ್ನಿಕ್ ಕಾಲೇಜು ಸರ್ಕಲ್ ನಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಪ್ರತಿಭಟನೆ ಮಾಡುವುದರ ಮೂಲಕ ಆಕ್ರೋಶ ವ್ಯಕ್ತ ಪಡಿಸಿದರು.
ಇದನ್ನೂ ಓದಿ : ದೇಶದ ಸಾರ್ವಜನಿಕ ಆಸ್ತಿ ಮಾರಾಟ ಮಾಡಿದ್ದೇ ಮೋದಿ ಸಾಧನೆ: ತಿಮ್ಮಾಪೂರ
ಇನ್ನು, ಬೆಲೆ ಏರಿಕೆಯ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸೈಕಲ್ ಜಾಥಾ ಮಾಡಿದರು. ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ಮಾಡಿ ಬಡವರ ಹೊಟ್ಟೆ ಮೇಲೆ ಬಿಜೆಪಿ ಸರ್ಕಾರ ತಣ್ಣಿರ ಬಟ್ಟೆಯನ್ನು ಇಡುತ್ತಿದೆ ಎಂದು ಪ್ರತಿಭಟನಾಕಾರರು ಸಿಡಿದೆದ್ದರು.
ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಚಾರದಲ್ಲಿ ಮೌನ ತಾಳಿರುವುದು ಯಾಕೆ..? ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು ಮೋದಿ ಹಾಗೂ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ತಕ್ತ ಪಡಿಸಿದ್ದಲ್ಲದೇ, ಬೆಲೆ ಇಳಿಕೆಗೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಮೂಡುಬಿದಿರೆ : ತೈಲ, ಅನಿಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವಿಶಿಷ್ಟ ಪ್ರತಿಭಟನೆ