ಕೊಯಂಬತ್ತೂರು: ನಗರದಲ್ಲಿ ಬಿಜೆಪಿ ಮತ್ತು ಹಿಂದೂ ಮುನ್ನಾನಿ ಮುಖಂಡರ ಮನೆಗಳ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಇಬ್ಬರು ಪದಾಧಿಕಾರಿಗಳನ್ನು ಭಾನುವಾರ ಬಂಧಿಸಲಾಗಿದೆ.
ಇದನ್ನೂ ಓದಿ : 15 ಕೋಟಿ ರೂ ವಂಚನೆ: ಆರೋಗ್ಯ ಸಚಿವಾಲಯದ ಸಿಬಂದಿ ಸೇರಿ ಐವರ ಬಂಧನ
ಸುದೀರ್ಘ ತಾಂತ್ರಿಕ ತನಿಖೆ, ಗುಪ್ತಚರ ಮಾಹಿತಿ ಮತ್ತು ಕುಣಿಯಮುತ್ತೂರು ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ವಿ ಬಾಲಕೃಷ್ಣನ್ ಸುದ್ದಿಗಾರರಿಗೆ ತಿಳಿಸಿದರು.
ಆರೋಪಿಗಳನ್ನು ಜೇಸುರಾಜ್ ಮತ್ತು ಇಲಿಯಾಸ್ ಎಂದು ಗುರುತಿಸಲಾಗಿದ್ದು, ವಿಚಾರಣೆ ಪೂರ್ಣಗೊಂಡ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹೇಳಿದ್ದಾರೆ.
ಇನ್ನೆರಡು ಪ್ರಕರಣಗಳಲ್ಲಿ ಭಾಗಿಯಾಗಿರುವ ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ಹುಡುಕುತ್ತಿದ್ದು, ಶೀಘ್ರವೇ ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು,ಸರಕಾರಿ ಬಸ್‌ಗೆ ಕಲ್ಲು ತೂರಿದ, ಇತರ ಪ್ರಕರಣಗಳಲ್ಲಿ ಪ್ರಗತಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ ಜಂಟಿಯಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ, ನಿವಾಸಗಳ ಮೇಲೆ ದಾಳಿ ನಡೆಸಿದ ಘಟನೆ ಬೆನ್ನಲ್ಲೇ ಪೆಟ್ರೋಲ್ ಬಾಂಬ್ ದಾಳಿ ನಡೆಸಲಾಗಿತ್ತು.