Advertisement

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

05:49 PM Sep 12, 2024 | |

ನವದೆಹಲಿ: ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಪೆಟ್ರೋಲಿಯಂ ಮತ್ತು ನ್ಯಾಚುರಲ್‌ ಗ್ಯಾಸ್‌ ಸಚಿವಾಲಯದ ಕಾರ್ಯದರ್ಶಿ ಪಂಕಜ್‌ ಜೈನ್‌ ಭರವಸೆ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

Advertisement

ಒಂದು ವೇಳೆ ಮುಂದಿನ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಾದರೆ ತೈಲ ಕಂಪನಿಗಳು ಪೆಟ್ರೋಲ್‌, ಡೀಸೆಲ್‌ ಬೆಲೆಯನ್ನು ಇಳಿಕೆ ಮಾಡುವ ಸಾಧ್ಯತೆ ಇದ್ದಿರುವುದಾಗಿ ಜೈನ್‌ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಸರ್ಕಾರ ಕೂಡಾ ಪೆಟ್ರೋಲ್‌, ಡೀಸೆಲ್‌ ಮೇಲಿನ ವಿಂಡ್‌ ಫಾಲ್‌ (Windfall) ತೆರಿಗೆಯನ್ನು ತೆಗೆದುಹಾಕುವ ಬಗ್ಗೆ ಚಿಂತನೆ ನಡೆಸುತ್ತಿದ್ದು, ಈ ವಿಚಾರದಲ್ಲಿ ತೈಲ ಸಚಿವಾಲಯ, ಹಣಕಾಸು ಸಚಿವಾಲಯದ ಜತೆ ಮಾತುಕತೆ ನಡೆಸಲಿದೆ ಎಂದು ಜೈನ್‌ ತಿಳಿಸಿದ್ದಾರೆ.

ಇದನ್ನೂ ಓದಿ:Olympics v/s Paris ಪ್ಯಾರಾಲಿಂಪಿಕ್ಸ್‌ ನಲ್ಲಿ ಭಾರತಕ್ಕೆ ಹೆಚ್ಚು ಯಶಸ್ಸು ಸಿಕ್ಕಿದ್ಹೇಗೆ?

2021ರ ಡಿಸೆಂಬರ್‌ ನಿಂದ ಜಾಗತಿಕ ಮಟ್ಟದಲ್ಲಿ ಬ್ರೆಂಡ್‌ ಕಚ್ಛಾ ತೈಲದ ಬೆಲೆಯಲ್ಲಿ ಇಳಿಕೆಯಾಗಿದೆ. ಬ್ರೆಂಟ್‌ ಕ್ರೂಡ್‌ ಬ್ಯಾರೆಲ್‌ ಗೆ 69.19 ಡಾಲರ್‌ ನಷ್ಟಿದ್ದು, ಕಚ್ಛಾ ತೈಲ ಬೆಲೆ ಬ್ಯಾರೆಲ್‌ ಗೆ 65.75 ಡಾಲರ್‌ ಇದ್ದಿರುವುದಾಗಿ ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next