ನವದೆಹಲಿ: ಕಳೆದ ನಾಲ್ಕು ದಿನಗಳಲ್ಲಿ ಮೂರನೇ ಬಾರಿ ತೈಲ ಬೆಲೆಯನ್ನು ಹೆಚ್ಚಳ ಮಾಡಿದ್ದು, ಶನಿವಾರ (ಮಾರ್ಚ್ 26)ವೂ ಕೂಡಾ ಪೆಟ್ರೋಲ್, ಡೀಸೆಲ್ ಬೆಲೆಯನ್ನು 80 ಪೈಸೆಯಷ್ಟು ಏರಿಕೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಸಂಕಟ ತಂದ ಕೀಟಲೆ; ರಾಜಸ್ಥಾನ ರಾಯಲ್ಸ್ ತಂಡದ ವಿರುದ್ದವೇ ಸಿಡಿದೆದ್ದ ನಾಯಕ ಸಂಜು ಸ್ಯಾಮ್ಸನ್
ಮಾರ್ಚ್ 22ರಿಂದ ಈವರೆಗೆ ಮೂರು ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿದ್ದು, ಪ್ರತಿ ಲೀಟರ್ ಮೇಲೆ ಒಟ್ಟು 2.40 ರೂಪಾಯಿಯಷ್ಟು ಏರಿಕೆ ಕಂಡಂತಾಗಿದೆ ಎಂದು ವರದಿ ವಿವರಿಸಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್ ಬೆಲೆ 103.93 ರೂಪಾಯಿಗೆ ಏರಿಕೆಯಾಗಿದ್ದು, ಡೀಸೆಲ್ ಪ್ರತಿ ಲೀಟರ್ ಬೆಲೆ 88.14 ರೂಪಾಯಿಗೆ ಹೆಚ್ಚಳವಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್ ಗೆ 98.61 ರೂಪಾಯಿಗೆ ಮಾರಾಟ ಮಾಡಲಾಗುತ್ತಿದ್ದು, ಡೀಸೆಲ್ ಪ್ರತಿ ಲೀಟರ್ ಬೆಲೆ 89.87 ರೂಪಾಯಿ.
ವಾಣಿಜ್ಯ ನಗರಿ ಮುಂಬಯಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 113.31 ರೂಪಾಯಿಗೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 97.50 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.
ರಷ್ಯಾ, ಉಕ್ರೇನ್ ನಡುವಿನ ಯುದ್ಧದ ಪರಿಣಾಮ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಳವಾಗುತ್ತಿದ್ದು, ಇದು ಭಾರತ ಸರ್ಕಾರದ ನಿಯಂತ್ರಣವನ್ನು ಮೀರಿದ್ದಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶುಕ್ರವಾರ ತಿಳಿಸಿದ್ದರು.