ನವದೆಹಲಿ: ಪಂಚರಾಜ್ಯ ಚುನಾವಣೆಯ ಫಲಿತಾಂಶ ಬಹಿರಂಗವಾದ ಕೆಲವು ದಿನಗಳ ನಂತರ ತೈಲೋತ್ಪನ್ನಗಳ ದರ ಏರಿಕೆಯ ಆಘಾತ ಬುಧವಾರವೂ (ಮಾರ್ಚ್ 23) ಮುಂದುವರಿದಿದ್ದು, ಪೆಟ್ರೋಲ್, ಡೀಸೆಲ್ ದರ 80 ಪೈಸೆಯಷ್ಟು ಏರಿಕೆಯಾಗಿದೆ.
ಇದನ್ನೂ ಓದಿ:ಮಂಗಳೂರು: ಅನುಮತಿ ಪಡೆಯದೇ ವಿದೇಶ ಪ್ರಯಾಣ; ಪೊಲೀಸ್ ಅಧಿಕಾರಿ ಸಸ್ಪೆಂಡ್
ಮಂಗಳವಾರ ಕೂಡಾ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 80 ಪೈಸೆಯಷ್ಟು ಏರಿಕೆಯಾಗಿದ್ದು, ಎಲ್ ಪಿಜಿ ದರ 50 ರೂಪಾಯಿ ಹೆಚ್ಚಳವಾಗಿತ್ತು. ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಪ್ರತಿ ಲೀಟರ್ ಬೆಲೆ 102.26 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 86.58 ರೂಪಾಯಿಗೆ ಹೆಚ್ಚಳವಾಗಿದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 97.01 ರೂಪಾಯಿಗೆ ಏರಿಕೆಯಾಗಿದೆ. ನಿನ್ನೆ ಪೆಟ್ರೋಲ್ ಬೆಲೆ ಲೀಟರ್ ಗೆ 96.21 ರೂಪಾಯಿಷ್ಟಿತ್ತು. ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 87.47 ರೂಪಾಯಿಗೆ ಏರಿಕೆಯಾಗಿದೆ.
ವಾಣಿಜ್ಯ ನಗರಿ ಮುಂಬಯಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 111.67 ರೂಪಾಯಿಗೆ ಏರಿದ್ದು, ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 95.85 ರೂಪಾಯಿಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 102.91 ರೂಪಾಯಿಗೆ ಏರಿಕೆ. ಡೀಸೆಲ್ ಬೆಲೆ 92.95 ರೂಪಾಯಿಗೆ ಹೆಚ್ಚಳವಾಗಿದೆ.
ಕೋಲ್ಕತಾದಲ್ಲಿ ಪೆಟ್ರೋಲ್ ಬೆಲೆ 106.34 ರೂಪಾಯಿಗೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 91.42 ರೂಪಾಯಿಗೆ ಹೆಚ್ಚಳವಾಗಿದೆ ಎಂದು ಮಾರುಕಟ್ಟೆ ವರದಿ ತಿಳಿಸಿದೆ.