ಇಸ್ಲಾಮಾಬಾದ್: ಆರ್ಥಿಕವಾಗಿ ದಿವಾಳಿ ಅಂಚಿನಲ್ಲಿರುವ ಪಾಕಿಸ್ತಾನದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಎಂಬಂತೆ ಪೆಟ್ರೋಲ್ ಬೆಲೆ ಲೀಟರ್ 300 ರೂಪಾಯಿಗೆ ಏರಿಕೆಯಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಇದನ್ನೂ ಓದಿ:Mysore; ಅಲಕೃಂತ ಆನೆಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ಚಾಲನೆ
ಒಂದರ ಹಿಂದೆ ಒಂದೊಂದೇ ಬಿಕ್ಕಟ್ಟನ್ನು ಎದುರಿಸುತ್ತಿರುವ ಪಾಕಿಸ್ತಾನ ಇದೀಗ ಲೀಟರ್ ಪೆಟ್ರೋಲ್ ಬೆಲೆಯನ್ನು 14.91 ರೂಪಾಯಿ ಹೆಚ್ಚಳ ಮಾಡಿದ್ದು, ಹೈಸ್ಪೀಡ್ ಡೀಸೆಲ್ ಬೆಲೆಯನ್ನು 18.44 ರೂಪಾಯಿ ಏರಿಕೆ ಮಾಡಿರುವುದಾಗಿ ಪಾಕ್ ವಿತ್ತ ಸಚಿವಾಲಯ ತಿಳಿಸಿದೆ.
ಬೆಲೆ ಏರಿಕೆಯೊಂದಿಗೆ ಪಾಕಿಸ್ತಾನದಲ್ಲೀಗ ಪೆಟ್ರೋಲ್ ಬೆಲೆ ಲೀಟರ್ ಗೆ 305.36 ರೂಪಾಯಿಯಾಗಿದ್ದು, ಡೀಸೆಲ್ ಬೆಲೆ ಲೀಟರ್ ಗೆ 311.84 ರೂಪಾಯಿಗೆ ಏರಿಕೆಯಾಗಿದೆ ಎಂದು ವರದಿ ವಿವರಿಸಿದೆ.
ಕಳೆದ ಒಂದು ದಶಕದಿಂದ ಪಾಕಿಸ್ತಾನ ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಒಳಗಾಗಿದೆ. ಪಾಕ್ ನ ಹಣದುಬ್ಬರ ಮತ್ತು ಬಡ್ಡಿದರ ಏರಿಕೆಯಿಂದಾಗಿ ಪಾಕಿಸ್ತಾನದ ಜನರು ಕಂಗಾಲಾಗುವಂತೆ ಮಾಡಿದೆ. ಆರ್ಥಿಕ ಬಿಕ್ಕಟ್ಟು, ರಾಜಕೀಯ ಅಸ್ಥಿರತೆಯಿಂದ ಪಾಕಿಸ್ತಾನ ಕಂಗೆಟ್ಟು ಹೋಗಿರುವುದಾಗಿ ವರದಿ ಹೇಳಿದೆ.
ಕಳೆದ ತಿಂಗಳು ಪಾಕ್ ಸಂಸತ್ ಅನ್ವರ್ ಉಲ್ ಹಖ್ ಕಾಖರ್ ಅವರನ್ನು ಹಂಗಾಮಿ ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದು, ನವೆಂಬರ್ ನಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.