ನವದೆಹಲಿ:ಬೆಂಗಳೂರು ಸೇರಿದಂತೆ ದೇಶಾದ್ಯಂತ ಇಂಧನ ಬೆಲೆ ಏರಿಕೆ ನಾಗಾಲೋಟ ಶುಕ್ರವಾರವೂ (ಅಕ್ಟೋಬರ್ 29) ಮುಂದುವರಿದಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 35 ಪೈಸೆ ಏರಿಕೆಯಾಗಿದೆ. ಇದರೊಂದಿಗೆ ದಾಖಲೆ ಪ್ರಮಾಣದ ಏರಿಕೆ ಕಂಡಂತಾಗಿದೆ ಎಂದು ಎಎನ್ ಐ ವರದಿ ಮಾಡಿದೆ.
ಇದನ್ನೂ ಓದಿ:ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಮರುನೇಮಕ: ಮತ್ತೆ ಮೂರು ವರ್ಷ ಮುಂದುವರಿಕೆ
ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್ ಗೆ 112.39 ರೂಪಾಯಿಗೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 103.31ರೂಪಾಯಿಗೆ ಹೆಚ್ಚಳವಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 108.64 ರೂಪಾಯಿ, ಮುಂಬಯಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 114.47 ರೂಪಾಯಿಗೆ ಏರಿಕೆಯಾಗಿದೆ.
ವಾಣಿಜ್ಯ ನಗರಿ ಮುಂಬಯಿಯಲ್ಲಿ ಡೀಸೆಲ್ ಬೆಲೆ ಲೀಟರ್ ಗೆ 105.49 ರೂಪಾಯಿ, ದೆಹಲಿಯಲ್ಲಿ ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 97.37 ರೂಪಾಯಿಗೆ ಹೆಚ್ಚಳವಾಗಿದೆ. ಕೋಲ್ಕತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 109.12 ರೂಪಾಯಿಗೆ ಮಾರಾಟ ಮಾಡುತ್ತಿದ್ದು, ಡೀಸೆಲ್ ಬೆಲೆ ಲೀಟರ್ ಗೆ 100.49 ರೂಪಾಯಿಗೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 105.43 ರೂಪಾಯಿ ಹಾಗೂ ಡೀಸೆಲ್ ಬೆಲೆ ಲೀಟರ್ ಗೆ 101.59 ರೂಪಾಯಿಗೆ ಹೆಚ್ಚಳವಾಗಿದೆ. ದೇಶದ ಬಹುತೇಕ ನಗರಗಳಲ್ಲಿ ಪೆಟ್ರೋಲ್ ಬೆಲೆ ಈಗಾಗಲೇ ಪ್ರತಿ ಲೀಟರ್ ಗೆ 100 ರೂಪಾಯಿ ಗಡಿ ದಾಟಿದೆ. ಡೀಸೆಲ್ ಬೆಲೆಯೂ ಪ್ರತಿ ಲೀಟರ್ ಗೆ ನೂರು ರೂಪಾಯಿ ಗಡಿ ದಾಟಿದೆ.