Advertisement

ಬಜೆಟ್ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ಮುಂಬೈನಲ್ಲಿ ಲೀಟರ್ ಗೆ 79 ರೂ.!

11:55 AM Jul 07, 2019 | Team Udayavani |

ನವದೆಹಲಿ:2019-20ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದ ಬೆನ್ನಲ್ಲೇ ಶನಿವಾರ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಲಾಗಿದೆ. ಒಂದು ರೂಪಾಯಿಯಷ್ಟು ಇಂಧನ ಮೇಲಿನ ಸುಂಕವನ್ನು ಬಜೆಟ್ ನಲ್ಲಿ ಹೆಚ್ಚಳ ಮಾಡಲಾಗಿತ್ತು.

Advertisement

ಪೆಟ್ರೋಲ್ ಬೆಲೆ ಲೀಟರ್ ಗೆ 2.45 ರೂಪಾಯಿ ಹೆಚ್ಚಳವಾಗಿದೆ, ಡೀಸೆಲ್ ಬೆಲೆ ಲೀಟರ್ ಗೆ 2.36 ರೂಪಾಯಿಗೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಇಂದು ಪೆಟ್ರೋಲ್ ಲೀಟರ್ ಗೆ 72.96 ರೂಪಾಯಿಯಾಗಿದೆ. ಡೀಸೆಲ್ ಗೆ 66.69 ರೂಪಾಯಿ.

ಶುಕ್ರವಾರ ಮಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್ ಗೆ 72.21 ರೂಪಾಯಿ ಹಾಗೂ ಡೀಸೆಲ್ ದರ ಲೀಟರ್ ಗೆ 65.84 ರೂಪಾಯಿ ಆಗಿತ್ತು.

ಮುಂಬೈಯಲ್ಲಿ ಪೆಟ್ರೋಲ್ ಲೀಟರ್ ಗೆ 78.57 ರೂಪಾಯಿಗೆ ಮಾರಾಟ ಮಾಡುತ್ತಿದ್ದು, ಕೋಲ್ಕತಾದಲ್ಲಿ ಪೆಟ್ರೋಲ್ ಲೀಟರ್ ಗೆ 75.15 ರೂಪಾಯಿಗೆ ಏರಿಕೆಯಾಗಿದೆ. ಎಕ್ಸೈಸ್ ಡ್ಯೂಟಿ ರಸ್ತೆ ಮತ್ತು ಮೂಲಸೌಕರ್ಯ ಸೆಸ್ ಹೆಚ್ಚಳ ಮಾಡುವ ಮೂಲಕ ಸುಮಾರು 28 ಸಾವಿರ ಕೋಟಿ ರೂ. ಸಂಗ್ರಹವಾಗುವುದಾಗಿ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next