Advertisement

ಕಚ್ಚಾ ತೈಲ ಬೆಲೆ ಇಳಿದರೂ ರಾಜ್ಯದಲ್ಲಿ ಇಂಧನ ತುಟ್ಟಿ

12:30 AM Jan 05, 2019 | Team Udayavani |

ಬೆಂಗಳೂರು: ಪೆಟ್ರೋಲ್‌ ಹಾಗೂ ಡೀಸೆಲ್‌ ಮೂಲ ಬೆಲೆಯಲ್ಲಿ ಗಣನೀಯ ಪ್ರಮಾಣದ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಹ ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ತೆರಿಗೆ ಪರಿಷ್ಕರಿಸಿದೆ. ಇದರಿಂದಾಗಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯಲ್ಲೂ ಹೆಚ್ಚಳವಾಗಿದೆ.

Advertisement

ಪೆಟ್ರೋಲ್‌ಗೆ ಶೇ.32 ಹಾಗೂ ಡೀಸೆಲ್‌ ಶೇ.21 ಕ್ಕೆ ತೆರಿಗೆ ಹೆಚ್ಚಿಸಲಾಗಿದೆ. ಈ ಹಿಂದೆ ತೆರಿಗೆ ಪ್ರಮಾಣ ಕ್ರಮವಾಗಿ ಶೇ.28.75 ಹಾಗೂ ಶೇ. 17.73 ಇತ್ತು. ಕಳೆದ ಎರಡೂವರೆ ತಿಂಗಳಿಂದ ಸತತವಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯು ಇಳಿಕೆಯಾಗುತ್ತಿದೆ.

ಇದರ ಪರಿಣಾಮವಾಗಿ ಪೆಟ್ರೋಲ್‌ ಮತ್ತು ಡೀಸೆಲ್‌ನ ಮೂಲ ಬೆಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು ಇದು ರಾಜ್ಯದ ರಾಜಸ್ವ ಸಂಗ್ರಹದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಹೀಗಾಗಿ, ಪರಿಷ್ಕರಣೆ ಮಾಡಲಾಗಿದೆ.

ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಅತಿ ಕಡಿಮೆ ಎಂದು ಅಂಕಿ-ಅಂಶ ನೀಡಲಾಗಿದೆ.ಪರಿಷ್ಕರಣೆ ನಂತರವೂ ಕರ್ನಾಟಕದಲ್ಲಿ ಪೆಟ್ರೋಲ್‌ ಲೀಟರ್‌ಗೆ 70.84 ರೂ., ಡೀಸೆಲ್‌ ಪ್ರತಿ ಲೀಟರ್‌ಗೆ 64.66 ದರ ಇದೆ ಎಂದು ಆರ್ಥಿಕ ಇಲಾಖೆ ತಿಳಿಸಿದೆ.

ರಾಜ್ಯ ಸರ್ಕಾರವು ಕಳೆದ ವರ್ಷ ಜುಲೈ 15 ರಂದು ಜಾರಿಗೆ ಬರುವಂತೆ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ತೆರಿಗೆಯನ್ನು ಶೇ.30 ರಿಂದ 32 ಕ್ಕೆ ಮತ್ತು ಶೇ.19 ರಿಂದ 21 ಕ್ಕೆ ಕ್ರಮವಾಗಿ ಹೆಚ್ಚಳ ಮಾಡಿತ್ತು.ಸತತ ಇಂಧನ ಬೆಲೆ ಹೆಚ್ಚಳವಾದ ಪರಿಣಾಮ ಸೆ. 17 ರಿಂದ ಜಾರಿಗೆ ಬರುವಂತೆ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ ಪ್ರತಿ ಲೀಟರ್‌ಗೆ ಸಂಗ್ರಹವಾಗುತ್ತಿದ್ದ ಮೊತ್ತವನ್ನು ರೂ. 2 ರಷ್ಟು ಕಡಿಮೆ ಮಾಡಲಾಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next