Advertisement

ಅತ್ಯಾಚಾರಕ್ಕೆ ಸಹಕರಿಸದ ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ

01:45 PM Oct 05, 2021 | Team Udayavani |

‌ಸುರಪುರ: ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಅತ್ಯಾಚಾರಕ್ಕೆ ಯತ್ನಿಸಿ ವಿಫಲನಾದ ಕಾಮುಕನೊಬ್ಬ ಮಹಿಳೆ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆಗೈದಿರುವ ಘಟನೆ ಸೋಮವಾರ ನಡೆದಿದೆ.

Advertisement

ಪಾಲಮ್ಮ ಮರೆಪ್ಪ ಸಕ್ರಿ (23) ಮೃತ ವಿವಾಹಿತೆ. ರಾತ್ರಿ ಊಟ ಮಾಡಿ ಮನೆಯಲ್ಲಿ ಮಲಗಿದ ವೇಳೆ ಅದೇ ಗ್ರಾಮದ ಗಂಗಪ್ಪ ಬಸಪ್ಪ ಅರಳೊಳ್ಳಿ ಎಂಬ ಯುವಕ ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ಮಹಿಳೆ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆ ಸಹಕರಿಸದೆ ಇದ್ದಾಗ ಕುಪಿತಗೊಂಡ ಯುವಕ, ಆಕೆ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ ಎಂದು ಮಹಿಳೆಯ ಪಾಲಕರು ದೂರಿನಲ್ಲಿ ಆರೋಪಿಸಿದ್ದಾರೆ.

ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅಸುನೀಗಿದ್ದಾಳೆ. ಸುರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪತ್ತೆಗೆ ಜಾಲ ಬೀಸಲಾಗಿದೆ ಎಂದು ಪಿಐ ಸುನೀಲಕುಮಾರ ಮೂಲಿಮನಿ ತಿಳಿಸಿದ್ದಾರೆ.

ಬಿಜೆಪಿಯ ಯಾರೂ ಕಾಂಗ್ರೆಸ್‌ ಸೇರಲ್ಲ
ಬಿಜೆಪಿ ಶಾಸಕರು ಕಾಂಗ್ರೆಸ್‌ ಸೇರಲಿದ್ದಾರೆಂಬ ವಿಚಾರವನ್ನೇ ಕಾಂಗ್ರೆಸ್‌ಮುಖಂಡರು ಬಂಡವಾಳ ಮಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ ಬಗ್ಗೆ ಗೊತ್ತಿದ್ದವರು ಆ ಪಕ್ಷಕ್ಕೆ ಹೋಗುವುದಿಲ್ಲ. ಬಿಜೆಪಿಯ ಯಾರೊಬ್ಬರೂ ಕಾಂಗ್ರೆಸ್‌ ಸೇರುವುದಿಲ್ಲ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸೋಮವಾರ ಕಾರ್ಯಕರ್ತರು ಮತ್ತು ಸಾರ್ವ ಜನಿಕರನ್ನು ಭೇಟಿ ಮಾಡಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಕಾಂಗ್ರೆಸ್‌ನ ಶಾಸಕರು ನನ್ನನ್ನು ಸಂಪರ್ಕಿಸಿದ್ದಾರೆ. ನಮಗೆ ಬೇಡ, ನೀವು, ಬರೋ ದಾದರೆ ರಾಜ್ಯ ಬಿಜೆಪಿ ಅಧ್ಯಕ್ಷರನ್ನು ಸಂಪರ್ಕಿಸಿ ಎಂದು ಹೇಳಿದ್ದೇನೆ ಎಂದರು.

ಪಕ್ಷಕ್ಕೆ ಸೇರ್ಪಡೆ ಮಾಡುವವರು ರಾಜ್ಯಾಧ್ಯಕ್ಷರು. ಅವರೇ ಭರವಸೆ ನೀಡಬೇಕು. ಅವರಿಗೆ ಸಮಗ್ರ ರಾಜ್ಯದ ಮಾಹಿತಿ ಇರುತ್ತದೆ ಎಂದು ಹೇಳಿದರು. ರಾಜಕಾಲುವೆ ತೆರವು, ಚರಂಡಿ ಸರಿಪಡಿಸುವ ಕಾರ್ಯದ ಕುರಿತು ಮುಖ್ಯಮಂತ್ರಿಗಳು ಸಭೆಯಲ್ಲಿ ಸ್ಪಷ್ಟ ಆದೇಶ ನೀಡಿದ್ದಾರೆ. ಅದರಂತೆ ಕೆಲಸಗಳು ನಡೆದಿವೆ. ಭಾನುವಾರ ತೀವ್ರ ಮಳೆ ಬಿದ್ದ ಕಾರಣ ಕೆಲವೆಡೆ ಸ್ವಲ್ಪ ಸಮಸ್ಯೆ ಆಗಿದೆ. ಆ ಸಮಸ್ಯೆ ಬಗ್ಗೆ ಮಧ್ಯರಾತ್ರಿ ತಿಳಿದು ಸಂಬಂಧಿತ ಎಂಜಿನಿಯರ್‌ಗಳಿಗೆ ತಿಳಿಸಿದ್ದು, ತಕ್ಷಣ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next