Advertisement
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಾಗುತ್ತಲೇ ಇದ್ದು, ದರ ಹೆಚ್ಚಳ ಅನಿವಾರ್ಯ ಎಂದು ತೈಲ ಕಂಪೆನಿಗಳು ಹೇಳುತ್ತಿವೆ. ಮೇ 4ರಿಂದ 20 ಬಾರಿ ದರ ಏರಿಸಲಾಗಿದೆ.
ದೇಶದ ಆರು ರಾಜ್ಯಗಳಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ ರವಿವಾರ 100 ರೂ. ದಾಟಿದೆ. ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಲಡಾಖ್ಗಳಲ್ಲಿ ಈ ಏರಿಕೆ ದಾಖಲಾಗಿದೆ.