Advertisement

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ 8 ರೂ. ಇಳಿಕೆ

07:44 PM Dec 01, 2021 | Team Udayavani |

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್‌ ಮೇಲಿನ ವ್ಯಾಟ್‌ ಶೇ. 30ರಿಂದ ಶೇ. 19.40ಗೆ ಇಳಿಸುವುದಾಗಿ ರಾಜ್ಯ ಸರ್ಕಾರ ಬುಧವಾರ ಘೋಷಿಸಿದೆ.

Advertisement

ಆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪೆಟ್ರೋಲ್‌ ಬೆಲೆಯಲ್ಲಿ ಲೀಟರ್‌ಗೆ 8 ರೂಪಾಯಿ ಇಳಿಕೆಯಾಗಲಿದೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​​ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

103.97 ರೂಪಾಯಿಯಿದ್ದ ಲೀಟರ್‌ ಪೆಟ್ರೋಲ್‌ ಬೆಲೆಯಲ್ಲಿ ಬುಧವಾರ ಮಧ್ಯ ರಾತ್ರಿಯಿಂದಲೇ 8 ರೂ. ಇಳಿಕೆಯಾಗಲಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ:ಜಾನುವಾರುಗಳಿಗೆ ಕಾಡಿಸುತ್ತಿರುವ ಕಾಲುಬಾಯಿ ರೋಗ; ಲಸಿಕೆ 2 ತಿಂಗಳು ವಿಳಂಬ

Advertisement

ನ. 4ರಂದು ಕೇಂದ್ರ ಸರ್ಕಾರವು ಪೆಟ್ರೋಲ್‌ ಬೆಲೆಯಲ್ಲಿ 5 ರೂಪಾಯಿ ಮತ್ತು ಡೀಸೆಲ್‌ ಬೆಲೆಯಲ್ಲಿ 10 ರೂಪಾಯಿ ಇಳಿಕೆ ಮಾಡಿತ್ತು. ಅದಾದ ನಂತರ ಹಲವು ರಾಜ್ಯಗಳು ವ್ಯಾಟ್‌ ಇಳಿಕೆ ಮಾಡಿ ಆದೇಶ ಹೊರಡಿಸಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next