ನವದೆಹಲಿ:ದೆಹಲಿ ಸ್ವಾಮಿತ್ವದ ತೈಲ ಮಾರುಕಟ್ಟೆ ಕಂಪನಿಗಳು ಬೆಲೆಯನ್ನು ಹೆಚ್ಚಿಸಿದ ಪರಿಣಾಮ ಗುರುವಾರವೂ(ಜನವರಿ 07, 2021) ಪೆಟ್ರೋಲ್ ಬೆಲೆಯಲ್ಲಿ ಏರಿಕೆಯಾಗಿದೆ. ಬುಧವಾರ(ಜ.6) ಪೆಟ್ರೋಲ್ ದರ ಲೀಟರ್ ಗೆ 26 ಪೈಸೆ ಏರಿಕೆಯಾಗಿತ್ತು. ಇದರಿಂದಾಗಿ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 83.97 ರೂ.ಗೆ ತಲುಪಿತ್ತು.
ಇಂದು ಪೆಟ್ರೋಲ್ ದರ ಲೀಟರ್ ಗೆ 23 ಪೈಸೆ ಹಾಗೂ ಡೀಸೆಲ್ ದರ ಲೀಟರ್ ಗೆ 26 ಪೈಸೆ ಏರಿಕೆಯಾಗಿದೆ. ಬೆಲೆ ಏರಿಕೆ ನಂತರ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 84.20 ರೂ.ಗೆ ತಲುಪಿದೆ. ಡೀಸೆಲ್ ಬೆಲೆ ಲೀಟರ್ ಗೆ 74.38 ರೂ.ಗೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್ ಗೆ 87.04 ರೂಪಾಯಿಗೆ ಏರಿಕೆಯಾಗಿದ್ದು, ಡೀಸೆಲ್ ದರ ಲೀಟರ್ ಗೆ 78.87 ರೂಪಾಯಿಗೆ ತಲುಪಿದೆ. ನಿನ್ನೆ ಪೆಟ್ರೋಲ್ ದರ ಲೀಟರ್ ಗೆ 86.79 ರೂಪಾಯಿಗೆ ಏರಿಕೆಯಾಗಿತ್ತು.
ಇದನ್ನೂ ಓದಿ:ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಸೂಚ್ಯಂಕ 270 ಅಂಕ ಏರಿಕೆ, ನಿಫ್ಟಿ 14, 200
ಮುಂಬೈನಲ್ಲಿ ಡೀಸೆಲ್ ಬೆಲೆ ಲೀಟರ್ ಗೆ 81.07 ರೂಪಾಯಿಗೆ ತಲುಪಿದೆ. ಬುಧವಾರ ಡೀಸೆಲ್ ದರ ಲೀಟರ್ ಗೆ 80.78 ರೂಪಾಯಿ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 90.83 ರೂಪಾಯಿಗೆ ಏರಿಕೆಯಾಗಿದೆ.
ಚೆನ್ನೈನಲ್ಲಿ ಪೆಟ್ರೋಲ್ ದರ ಲೀಟರ್ ಗೆ 86.96ಕ್ಕೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ ಲೀಟರ್ ಗೆ 79.72 ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 85.68ಕ್ಕೆ ಏರಿಕೆಯಾಗಿದ್ದು, ಡೀಸೆಲ್ ದರ ಲೀಟರ್ ಗೆ 77.97 ರೂ.ಗೆ ತಲುಪಿದೆ ಎಂದು ತೈಲ ಮಾರುಕಟ್ಟೆ ಕಂಪನಿಗಳು ತಿಳಿಸಿವೆ.